ನಗ್ನ ಚಿತ್ರ ಬಹಿರಂಗಪಡಿಸುವುದಾಗಿ ಬೆದರಿಸಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ! - Mahanayaka
7:00 AM Saturday 6 - December 2025

ನಗ್ನ ಚಿತ್ರ ಬಹಿರಂಗಪಡಿಸುವುದಾಗಿ ಬೆದರಿಸಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ!

belthangady
04/11/2021

ಬೆಳ್ತಂಗಡಿ:  ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಯುವಕನೋರ್ವ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದ್ದು, ಘಟನೆ ಸಂಬಂಧ ಇದೀಗ ಆರೋಪಿಯನ್ನು  ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಆಟೋ ರಿಕ್ಷಾ ಚಾಲಕನಾಗಿರುವ ನೆಲ್ಯಾಡಿಯ ಹೊಸಮಜಲು ನಿವಾಸಿ ನೌಫಲ್ ಎಂಬಾತನ ಮೇಲೆ ಈ ಆರೋಪ ಕೇಳಿ ಬಂದಿದ್ದು,  2018ರಲ್ಲಿ ಇಲ್ಲಿನ ಹಳ್ಳಿಯೊಂದರ ಶಾಲೆಗೆ ಹೋಗುವ ಬಾಲಕಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಈತ, ಬಳಿಕ ಆಕೆಯ ಪರಿಚಯ ಮಾಡಿಕೊಂಡು, ಬಾಲಕಿಯ ಮುಗ್ದತೆಯನ್ನು ಬಳಸಿಕೊಂಡು ಯಾರೂ ಇಲ್ಲದ ಸಂದರ್ಭದಲ್ಲಿ ಆಕೆಯ ಮನೆಗೆ ಬಂದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಅತ್ಯಾಚಾರವನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದ ನೌಫಲ್, ಬಳಿಕ ಈ ವಿಡಿಯೋವನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈತನ ಕಿರುಕುಳದಿಂದ ರೋಸಿ ಹೋದ ಬಾಲಕಿಯು ಕೊನೆಗೆ ತನ್ನ ತಾಯಿಯ ಬಳಿ ಈ ವಿಚಾರ ತಿಳಿಸಿದ್ದು,  ಬಳಿಕ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ