ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷರಾಗಿ ನಜ್ಮಾ ನಝೀರ್ ಚಿಕ್ಕನೇರಳೆ ನೇಮಕ - Mahanayaka

ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷರಾಗಿ ನಜ್ಮಾ ನಝೀರ್ ಚಿಕ್ಕನೇರಳೆ ನೇಮಕ

najma nazir
17/02/2023

ಬೆಂಗಳೂರು: ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷರಾಗಿ ನಜ್ಮಾ ನಝೀರ್ ಚಿಕ್ಕನೇರಳೆ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇಮಕ ಮಾಡಿದ್ದಾರೆ.


Provided by
Provided by
Provided by
Provided by
Provided by
Provided by
Provided by

ಜೆಡಿಎಸ್ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಮಹಿಳೆಯರನ್ನು ಸಂಘಟಿಸಲು ಪ್ರವಾಸ ಕೈಗೊಂಡು ಪಕ್ಷವನ್ನು ಬಲವರ್ಧನೆ ಮಾಡುವಂತೆ ಸಿಎಂ ಇಬ್ರಾಹಿಂ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ನಜ್ಮಾ, ಅತ್ಯಂತ ಖುಷಿಯ ಸಂಗತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ, ಜಾತ್ಯಾತೀತ ಜನತಾದಳ ಪಕ್ಷ ನನ್ನನ್ನು ಮಹಿಳಾ ಘಟಕದ ‘ರಾಜ್ಯ ಕಾರ್ಯಾಧ್ಯಕ್ಷೆ’ಯಾಗಿ ನೇಮಕ ಮಾಡಿದೆ. ನನ್ನ ಮೇಲೆ ನಂಬಿಕೆ ಇಟ್ಟು ಬಹುದೊಡ್ಡ ಜವಾಬ್ದಾರಿಯನ್ನು ನೀಡಿದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅಪ್ಪಾಜಿರವರಿಗೂ, ರಾಜ್ಯಾಧ್ಯಕ್ಷರಾದ ಸಿ.ಎಂ ಇಬ್ರಾಹಿಂ ಸಾಹೇಬರಿಗೂ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿರವರಿಗೂ,ಮಹಿಳಾ ರಾಜ್ಯಾಧ್ಯಕ್ಷರಾದ ಶ್ರೀಮತಿ ಲೀಲಾದೇವಿ ಪ್ರಸಾದ್ ಅಮ್ಮನವರಿಗೂ ಹಾಗು ಪಕ್ಷದ ಎಲ್ಲಾ ವರಿಷ್ಠರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಹೊಸ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆ,ಪ್ರಾಮಾಣಿಕತೆಯೊಂದಿಗೆ ನಿಭಾಯಿಸುತ್ತೇನೆ ಎಂದಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ