10:48 AM Saturday 23 - August 2025

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

st somashekhar
21/12/2021

ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ನಕಲಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ರುಚಿ, ಪರಿಶುದ್ಧತೆಯ ಮೂಲಕ ನಂದಿನಿ ತುಪ್ಪ ಸಾಕಷ್ಟು ಪ್ರಖ್ಯಾತಿ ಆಗಿದೆ. ನಿತ್ಯ ನೂರು ಟನ್ ಗೂ ಹೆಚ್ಚು ತುಪ್ಪ ಉತ್ಪಾದನೆ ಮಾಡಲಾಗುತ್ತದೆ. ತಿರುಪತಿ, ಅಯೋಧ್ಯೆಗೆ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ಸೇನೆಗೂ ಸಹ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದರೆ ಸಾರ್ವಜನಿಕರು ಕೆಎಂಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ತಿಳಿಸಿದರು.

ಕಲಬೆರೆಕೆ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಕೆಎಂಎಫ್ ಜೊತೆ ಕೈಜೋಡಿಸಬೇಕು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಾಪ ಕಳೆಯುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಅತ್ಯಾಚಾರ: ದೇವಮಾನವ ಮತ್ತು ಆತನ ಪತ್ನಿ ಅರೆಸ್ಟ್

ಒಂದು ಇಂಚು ನೆಲವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಚಿವರ ಮಕ್ಕಳೇ ಕ್ರಿಶ್ಚಿಯನ್ ಸ್ಕೂಲ್ ನಲ್ಲಿ ಕಲಿತಿದ್ದಾರೆ, ಅಲ್ಲಿ ಮತಾಂತರಕ್ಕೆ ಬಲವಂತ ಮಾಡಿದ್ರಾ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ಸರ್ಕಾರಿ ಕಚೇರಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ: ಆರ್​ ಟಿಐ ಕಾರ್ಯಕರ್ತನ ಬಂಧನ

ಕಿರಣಿ ಅಂಗಡಿಗೆ ಬೆಂಕಿ ಹಚ್ಚಿದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

Exit mobile version