ನಕಲಿ ಮದ್ಯ ಸೇವಿಸಿ ಮೂವರು ಸಾವು, ಹಲವರು ಅಸ್ವಸ್ಥ, ದೃಷ್ಟಿ ಕಳೆದುಕೊಂಡ ಜನ

alkohal
05/08/2022

ರಾಂಚಿ: ನಕಲಿ ಮದ್ಯ ಸೇವಿಸಿ ಕನಿಷ್ಠ ಮೂವರು ಸಾವನ್ನಪ್ಪಿ ಹಲವರು ಅಸ್ವಸ್ಥಗೊಂಡ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಕೆಲವರು ದೃಷ್ಠಿ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ನಂತರ, ಸರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು ಸಂತ್ರಸ್ತರನ್ನು ಸದರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.

ಆರೋಗ್ಯದಲ್ಲಿ ಏರುಪೇರು ಉಂಟಾಗಿರುವವರನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಪಿಎಂಸಿಎಚ್) ಔಷಧಿ ಪಡೆಯುತ್ತಿದ್ದಾರೆ ಮತ್ತು ಸಾವಿನ ಕಾರಣವನ್ನು ಕಂಡುಹಿಡಿಯಲು ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿದೆ’ ಎಂದು ಸರನ್ ಡಿಎಂ ರಾಜೇಶ್ ಮೀನಾ ತಿಳಿಸಿದ್ದಾರೆ.

ಬಿಹಾರದಲ್ಲಿ ನಕಲಿ ಮದ್ಯಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ. ನಕಲಿ ಮದ್ಯದಿಂದಾಗಿ ಸಾಕಷ್ಟು ಜನರು ಸಾವನ್ನಪ್ಪಿರುವ ಘಟನೆಗಳು ನಡೆದಿದ್ದರೂ ಮತ್ತೆ ಮತ್ತೆ ಇಂತಹದ್ದೇ ಘಟನೆಗಳು ಮರುಳಿಸುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version