ಯುವ ಕಾಂಗ್ರೆಸ್ ಮುಖಂಡರಾದ ಮೊಹಮ್ಮದ್ ನಲಪಾಡ್, ಮಿಥುನ್ ರೈ ಅರೆಸ್ಟ್ - Mahanayaka

ಯುವ ಕಾಂಗ್ರೆಸ್ ಮುಖಂಡರಾದ ಮೊಹಮ್ಮದ್ ನಲಪಾಡ್, ಮಿಥುನ್ ರೈ ಅರೆಸ್ಟ್

mithun nalapad
29/03/2021


Provided by

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಬೈಕ್ ರ್ಯಾಲಿ ಮೂಲಕ ಆಗಮಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ಮುರಿದು ಠಾಣೆಗೆ ನುಗ್ಗಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು‌, ಪೊಲೀಸ್ ಠಾಣೆ ಎದುರೇ ಕುಳಿತು ಪ್ರತಿಭಟನೆ ನಡೆಸಲಾರಂಭಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಮೊಹಮ್ಮದ್ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ