ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಅಂಗಡಿಗಳು ಓಪನ್: ಇಲ್ಲಿದೆ ವಿವರ - Mahanayaka
5:26 PM Wednesday 20 - August 2025

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಅಂಗಡಿಗಳು ಓಪನ್: ಇಲ್ಲಿದೆ ವಿವರ

dakshina kannada
22/06/2021


Provided by

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಜೂನ್ 23ರಿಂದ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ನಾಳೆ(ಜೂ.23)ಯಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ  ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ, ಈ ಬಗ್ಗೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿಯಾದ ವೇಳೆ, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೇಟ್ ಗಳು ಇನ್ನೂ ಕಡಿಮೆಯಾಗಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ಇನ್ನೂ ಜನ ಜೀವನಕ್ಕೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ನಾಳೆಯಿಂದ ಎಲ್ಲ ಅಂಗಡಿಗಳನ್ನು ಮಧ್ಯಾಹ್ನ 2ಗಂಟೆಯ ತನಕ ತೆರೆಯಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆ ಬಹಳ ಕಠಿಣ ಪರಿಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು, ಬೇಕಾಬಿಟ್ಟಿಯಾಗಿ ತಿರುಗಾಟ ಮಾಡಬಾರದು. ವ್ಯಾಕ್ಸಿನ್ ನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಕೊರೊನಾ ನಿಯಮಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಜನಜಂಗಳಿಯಾಗದಂತೆ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ