ಕಠಿಣ ನಿಯಮ: ನಾಳೆಯಿಂದ ಏನೆಲ್ಲ ಇದೆ ಏನೆಲ್ಲ ಇಲ್ಲ? - Mahanayaka
6:03 AM Saturday 18 - October 2025

ಕಠಿಣ ನಿಯಮ: ನಾಳೆಯಿಂದ ಏನೆಲ್ಲ ಇದೆ ಏನೆಲ್ಲ ಇಲ್ಲ?

karnataka lockdown
26/04/2021

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು  ಸಚಿವ ಸಂಪುಟ ಸಭೆಯ ಬಳಿಕ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದೆ.


Provided by

ನಾಳೆಯಿಂದ ಸಾರ್ವಜನಿಕರು ಸರ್ಕಾರ ಹೊರಡಿಸುವ ಹೊಸ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲೇ ಬೇಕಾಗಿದೆ. ನಾಳೆಯಿಂದ ಯಾವ ಸೌಲಭ್ಯಗಳು ಇವೆ? ಯಾವೆಲ್ಲ ಸೌಲಭ್ಯಗಳು ಇಲ್ಲ ಎನ್ನುವ ಮಾಹಿತಿ ಈ ಕೆಳಗಿನಂತಿವೆ.

ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಇದೆ.  ಕೆ.ಎಸ್.ಆರ್.ಟಿ.ಸಿ., ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತವಾಗಲಿದೆ.

ಕ್ಯಾಬ್, ಆಟೋ, ಖಾಸಗಿ ವಾಹನಗಳ ಸಂಚಾರಕ್ಕೂ ನಿಷೇಧಿಸಲಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಸ್ಥಗಿತಮಾಡಲಾಗಿದೆ. ಖಾಸಗಿ ವಾಹನ ಸಂಚಾರಕ್ಕೆ ನಿಷೇಧ ಮಾಡಲಾಗಿದೆ.  ಗಾರ್ಮೆಂಟ್ಸ್ ಹೊರತುಪಡಿಸಿ ಉಳಿದೆಲ್ಲ ಕಾರ್ಖಾನೆಗಳಿಗೆ ಅನುಮತಿ ನೀಡಲಾಗಿದೆ.

ಗೂಡ್ಸ್ ವಾಹನಗಳ ಸರಕು ಸಾಗಾಟಕ್ಕೆ ಮಾತ್ರ ಅವಕಾಶ ಇದೆ. ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ.   ಮದ್ಯದಂಗಡಿಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ.  ಇ-ಕಾಮರ್ಸ್ ಮೂಲಕ ವಸ್ತುಗಳ ಡಿಲಿವರಿಗೆ ಅವಕಾಶ ನೀಡಲಾಗಿದೆ.

ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ ನೀಡಲಾಗಿದೆ. ಕಂಪನಿ, ಸಂಸ್ಥೆಗಳ ಸಾಧ್ಯವಾದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಗೆ ಸೂಚನೆ ನೀಡಲಾಗಿದೆ. ಕೃಷಿ ಚಟುವಟಿಕೆ, ಕಟ್ಟಡ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ.

ಇತ್ತೀಚಿನ ಸುದ್ದಿ