ನಳಿನ್, ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಸಿ.ಟಿ,ರವಿ ಅವರೇ... ನಿಮಗೂ ಫ್ರೀ... | ಕಾಲೆಳೆದ ಕಾಂಗ್ರೆಸ್ - Mahanayaka

ನಳಿನ್, ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಸಿ.ಟಿ,ರವಿ ಅವರೇ… ನಿಮಗೂ ಫ್ರೀ… | ಕಾಲೆಳೆದ ಕಾಂಗ್ರೆಸ್

bjp
03/06/2023


Provided by

ಸಿಎಂ ಸಿದ್ದರಾಮಯ್ಯನವರು ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದ್ದು,  ಬಿಜೆಪಿ ನಾಯಕರನ್ನು ವ್ಯಂಗ್ಯವಾಡಿದೆ.

ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆಯವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ.ರವಿ ಅವರೇ ನಿಮ್ಮ ಮನೆಯವರಿಗೂ 2 ಸಾವಿರ ಫ್ರೀ, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ(ಪದವಿ ಪಡೆದಿದ್ದವರಿದ್ರೆ ಮಾತ್ರ) ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕರ್ನಾಟಕ ಚುನಾವಣಾ ಫಲಿತಾಂಶ ಹೊರ ಬಿದ್ದಂತೆಯೇ ಕಾಂಗ್ರೆಸ್ ನೀಡಿದ ಗ್ಯಾರೆಂಟಿಗಳನ್ನು ಜಾರಿ ಮಾಡಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ವಿವಿಧೆಡೆಗಳಲ್ಲಿ ವಿದ್ಯುತ್ ಬಿಲ್ ಕಟ್ಟಬೇಡಿ, ಬಸ್ ಗಳಲ್ಲಿ ಮಹಿಳೆಯರು ಹಣ ನೀಡಬೇಡಿ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು.

ಗ್ಯಾರೆಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮೋಸ ಮಾಡಿದೆ ಎಂದು ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ನಾಯಕರು ಅಂದು ನೀಡಿದ್ದ ಹೇಳಿಕೆಗಳಿಗೆ ಕಾಂಗ್ರೆಸ್ ಇಂದು ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷ ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರೆಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಕಾಂಗ್ರೆಸ್ ಹೇಳಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ