ಕಾಡು ಮನುಷ್ಯ ನಳಿನ್ ಕುಮಾರ್ ಕಟೀಲ್ ನ್ನು ಕಾಡಿಗೇ ಬಿಡಬೇಕು | ಸಿದ್ದರಾಮಯ್ಯ ಹೇಳಿಕೆ - Mahanayaka

ಕಾಡು ಮನುಷ್ಯ ನಳಿನ್ ಕುಮಾರ್ ಕಟೀಲ್ ನ್ನು ಕಾಡಿಗೇ ಬಿಡಬೇಕು | ಸಿದ್ದರಾಮಯ್ಯ ಹೇಳಿಕೆ

22/10/2020

ಬೆಂಗಳೂರು: ಕಾಡು ಮನುಷ್ಯ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಡಿನಲ್ಲಿಯೇ ಬಿಟ್ಟು ಬರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದು, ಉಪ ಚುನಾವಣೆ ಸಂಬಂಧ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡೆ ಒಡೆಯುತ್ತೇನೆ, ಹುಲಿಯಾನನ್ನು ಕಾಡಿಗೆ ಕಳುಹಿಸುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಇದಲ್ಲದೇ ದೇವೇಗೌಡರಿಗೆ ಸಿದ್ಧರಾಮಯ್ಯನವರಿಂದ ಅನ್ಯಾಯವಾಗಿದೆ ಎಂದೂ ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಗಳ ವಿರುದ್ಧ ಇಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ.\

ಎಚ್.ಡಿ. ದೇವೇಗೌಡರಿಗೆ ನನ್ನಿಂದ ತೊಂದರೆಯಾಗಿದ್ದರೆ ಅವರು ಮಾತನಾಡುತ್ತಾರೆ. ಅವರ ಪರವಾಗಿ ಮಾತನಾಡುವ ಅಧಿಕ ಪ್ರಸಂಗತನ ಈ ನಳಿನ್ ಕುಮಾರ್ ಕಟೀಲ್ ಗೆ ಯಾಕೆ? ಅವರ ಪಕ್ಷದ ಶಾಸಕನೇ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳ್ಕೊಂಡಿದ್ದಾರೆ. ಅಂತಹವರ ವಿರುದ್ಧ ಕ್ರಮಕೈಗೊಳ್ಳುವ ಧೈರ್ಯ ಈ ಕಟೀಲ್‌ ಗೆ ಇಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ