ನಳಿನ್ ಕುಮಾರ್ ಕಟೀಲ್ ಕಾರನ್ನು ಜಗ್ಗಾಡಿದ ಕಾರ್ಯಕರ್ತರು: ಬೆಳ್ಳಾರೆಯಲ್ಲಿ ಲಾಠಿ ಚಾರ್ಜ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ವಿಚಾರವಾಗಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧವೇ ತಿರುಗಿ ಬಿದ್ದಿದ್ದು, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಅಡ್ಡನಿಂದ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಕಾರನ್ನು ಜಗ್ಗಾಡಿದ ಘಟನೆಯೂ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಗಮನಿಸಿದ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಗುಂಪು ಚದುರಿಸಿದ್ದಾರೆ.
ನಮ್ಮದೇ ಸರ್ಕಾರ ಇದ್ದರೂ, ನಮ್ಮ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ತಮ್ಮದೇ ನಾಯಕರ ವಿರುದ್ಧ ಕಾರ್ಯಕರ್ತರು ತಿರುಗಿಬಿದ್ದಿದ್ದು, ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka