ಎತ್ತಿನಹೊಳೆ ವಿಚಾರದಲ್ಲಿ ನಳಿನ್ ಕುಮಾರ್ ಕಟೀಲ್ ಡಬಲ್ ಗೇಮ್: ರಮಾನಾಥ ರೈ ಆರೋಪ - Mahanayaka
8:26 AM Wednesday 27 - August 2025

ಎತ್ತಿನಹೊಳೆ ವಿಚಾರದಲ್ಲಿ ನಳಿನ್ ಕುಮಾರ್ ಕಟೀಲ್ ಡಬಲ್ ಗೇಮ್: ರಮಾನಾಥ ರೈ ಆರೋಪ

ramanath rai
22/12/2022


Provided by

ಮಂಗಳೂರು: ಬಿಜೆಪಿ ಪ್ರತಿಯೊಂದು ವಿಚಾರದಲ್ಲಿಯೂ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತದೆ. ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಪ್ರತಿಭಟನೆ, ಪಾದಯಾತ್ರೆ ಮಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲು ಇದೀಗ ಹಾಸನ, ಕೋಲಾರದಲ್ಲಿ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ, ಕಸ್ತೂರಿ ರಂಗನ್ ವರದಿ ಕೂಡಾ ಇನ್ನೂ ಕರಡು ಅಧಿಸೂಚನೆಯ ಹಂತದಲ್ಲಿದ್ದು, ಇದು ಜೀವಂತವಾಗಿದ್ದು, ಎಂದಿಗೂ ತೂಗುಗತ್ತಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತನ್ನ ಹಿಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಕಸ್ತೂರಿ ರಂಗನ್ ವರದಿ ರದ್ದುಪಡಿಸುವುದಾಗಿ ಹೇಳಿಕೊಂಡಿತ್ತು. ಆದರೆ ಐದು ವರ್ಷವಾದರೂ ಆಗಿಲ್ಲ ಎಂದರು.

ಎತ್ತಿನ ಹೊಳೆ ವಿಚಾರದಲ್ಲಿಯೂ ನಾನು ಎಂದೂ ಹಿಪಾಕ್ರಸಿ ಪಾಲಿಟಿಕ್ಸ್ ಮಾಡಿಲ್ಲ. ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಯ ಜನರಿಗೆ ತೊಂದರೆ ಆದರೆ ಪಶ್ಚಿಮ ವಾಹಿನಿ ಯೋಜನೆಗಾಗಿ ಸುಮಾರು 60 ಮಂದಿಯ ರೈತರ ನಿಯೋಗವನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರ ಬಳಿ ಕರೆದೊಯ್ದು, ಬಜೆಟ್‌ನಲ್ಲಿ ಹಣ ಮಂಜೂರು ಮಾಡಲಾಗಿತ್ತು. ಬಳಿಕ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಕಳೆದ ವರ್ಷ ಮತ್ತು ಈ ವರ್ಷ ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka


LIVE

ಇತ್ತೀಚಿನ ಸುದ್ದಿ