ಕಾಂಗ್ರೆಸ್ ನಲ್ಲಿ  ಸಿದ್ದರಾಮಯ್ಯ ನಾಯಕತ್ವಕ್ಕೆ ಬೆಲೆ ಇಲ್ಲ | ನಳಿನ್ ಕುಮಾರ್ ಕಟೀಲ್ - Mahanayaka

ಕಾಂಗ್ರೆಸ್ ನಲ್ಲಿ  ಸಿದ್ದರಾಮಯ್ಯ ನಾಯಕತ್ವಕ್ಕೆ ಬೆಲೆ ಇಲ್ಲ | ನಳಿನ್ ಕುಮಾರ್ ಕಟೀಲ್

08/11/2020

ತುಮಕೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ನಾಯಕತ್ವಕ್ಕೆ ಬೆಲೆ ಇಲ್ಲದಾಗಿದೆ. ಹಾಗಾಗಿ ಅವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ನಲ್ಲಿ ಕಳೆದು ಹೋಗುವ ಭೀತಿ ಇದೆ ಎಂದು ಹೇಳಿದರು.

ಶಿರಾದಲ್ಲಿ 25 ಸಾವಿರ, ಆರ್.ಆರ್ ನಗರದಲ್ಲಿ 40 ಸಾವಿರ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಶಿರಾದಲ್ಲಿ ವಿಜಯೇಂದ್ರ, ಸುರೇಶ್ ಗೌಡ, ರವಿಕುಮಾರ್, ಎಸ್.ಆರ್ ಗೌಡ, ಬಿ.ಕೆ ಮಂಜುನಾಥ್ ಇವರ ಸಾಮೂಹಿಕ ಹೋರಾಟದಲ್ಲಿ ಗೆಲ್ಲುತ್ತದೆ.  ಆರ್.ಆರ್ ನಗರದಲ್ಲಿ ಆರ್ ಅಶೋಕ್, ಅರವಿಂದ ಲಿಂಬಾವಳಿ ಸೇರಿದಂತೆ ಸಾಮೂಹಿಕ ಪ್ರಯತ್ನದಿಂದ ಗೆಲುವಾಗಲಿದೆ ಎಂದು ಅವರು ಹೇಳಿದರು.

ಶಿರಾದಲ್ಲಿ ಕಾಂಗ್ರೆಸ್ ಸೋಲಿಸುವುದಕ್ಕೆ ಡಿ.ಕೆ ಶಿವಕುಮಾರ್ ತಲೆಬಿಸಿ ಮಾಡಿಕೊಂಡಿದ್ದರು. ಆರ್‍ಆರ್ ನಗರದಲ್ಲಿ ಕಾಂಗ್ರೆಸ್ ಸೋಲಿಸುವುದಕ್ಕೆ ಸಿದ್ದರಾಮಯ್ಯ ತಲೆಬಿಸಿ ಮಾಡಿಕೊಂಡಿದ್ದರು. ಕಾಂಗ್ರೆಸ್ಸಿನ ಆಂತರಿಕ ಜಗಳ ಈಗ ಬೀದಿಜಗಳವಾಗಿದೆ ಎಂದು ಕಟೀಲ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ