11:50 AM Thursday 16 - October 2025

ನಾಲ್ಕು ಮಂತ್ರಿಗಳು ಯಾರ ಹತ್ತಿರ ಮಾತಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

priyank kharge
03/03/2022

ಬೆಂಗಳೂರು: ಉಕ್ರೇನ್‍ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಈಗಾಗಲೇ ಕ್ಲೋಸ್ ಮಾಡಲಾಗಿದೆ. ಆದರೂ ಇಲ್ಲಿಂದ ಹೋದ ನಾಲ್ಕು ಮಂತ್ರಿಗಳು ಯಾರ ಹತ್ತಿರ ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರಷ್ಯಾ-ಉಕ್ರೇನ್ ಯುದ್ದದಲ್ಲಿ ಸಾವನ್ನಪ್ಪಿದ ಕನ್ನಡಿಗ ನವೀನ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಇನ್ನೂ ಅದೇಷ್ಟೂ ವಿದ್ಯಾರ್ಥಿಗಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ನಮ್ಮ ರಾಜ್ಯ ಇನ್ನೂ ನಾಟಕವೇ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಪಾಕಿಸ್ತಾನದವರಿಗೆ ಸುರಕ್ಷಿತ ಮಾರ್ಗ ಸಿಕ್ಕಿದೆ. ನಮ್ಮ ದೇಶಕ್ಕೆ ಯಾಕೆ ಸಿಕ್ಕಿಲ್ಲ. ಆತಂಕದಲ್ಲಿ ಮನೆಗೆ ಹೋಗಬೇಕೆಂದಿರುವ ವಿದ್ಯಾರ್ಥಿಗಳ ಮುಂದೆ ಉದ್ದುದ್ದ ಭಾಷಣ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳದೆ ಕೇವಲ ತಮಾಷೆ ನೋಡುತ್ತಿದೆ. ನಿಜವಾದ ನ್ಯಾಟೋ ಇಲ್ಲಿಯೇ ಇದೆ. ಕೇವಲ ವಿದ್ಯಾರ್ಥಿಗಳ ಲೆಕ್ಕ ಸಿಗುತ್ತಿದೆ. ಉಳಿದವರ ಕಥೆ ಏನು? ಕೇವಲ 10 ಜನ ವಿದ್ಯಾರ್ಥಿಗಳನ್ನು ಕರೆತಂದು ಬೆನ್ನು ಚಪ್ಪರಿಸಿಕೊಳ್ತಿದ್ದೀರಿ. ಸಾವಿರಾರು ಜನರನ್ನು ಅಲ್ಲಿಯೇ ಬಿಟ್ಟು ಬಂದಿದ್ದೀರಲ್ಲ ಅವರ ಕಥೆ ಏನು? ಹೀಗೆ ಮಾಡಿದರೆ ಭಾರತ ವಿಶ್ವ ಗುರು ಹೇಗೆ ಆಗುತ್ತದೆ. ಮೋದಿ ಬಂದಾಗಿನಿಂದ ದೇಶದ ಘನತೆ ಕಮ್ಮಿಯಾಗಿದೆ ಎಂದು ದೂರಿದರು.

ಮೋದಿ ಪ್ರಧಾನಿಯಾದಾಗಿನಿಂದ ದೇಶದ ಘನತೆ ಕಮ್ಮಿಯಾಗಿದೆ ಎಂದರಲ್ಲದೆ, ಇಂತಹ ಸಂಕಷ್ಟದ ಸಂದರ್ಭದಲ್ಲಿ ಪ್ರಧಾನಿಗಳು ವಿದ್ಯಾರ್ಥಿಗಳನ್ನು ಪ್ರೇರಪಿಸಬೇಕು. ಆದರೆ ಪ್ರಧಾನಿಗಳ ಮಾತು ಶೋಭೆ ತರುತ್ತದೇಯೇ ಎಂದು ಅವರು ಪ್ರಶ್ನಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನವೀನ್ ಸಾವು: ಬಿಜೆಪಿ ನಾಯಕರಿಂದ ಅರ್ಥವಿಲ್ಲದ ಹೇಳಿಕೆ; ತಮಿಳುನಾಡು ಸಿಎಂ ಸ್ಟಾಲಿನ್ ವಾಗ್ದಾಳಿ

ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಡಿವೈಡರ್‌ ಗೆ ಕಾರು ಡಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ\

ಪ್ರೀತಿಸಿ ಮದುವೆಯಾದ ಯುವಕ ಆತ್ಮಹತ್ಯೆ: ಸತ್ತು ಮೂರು ದಿನವದರೂ ಕುಟುಂಬಸ್ಥರಿಗೆ ತಿಳಿಸದ ಪತ್ನಿ

ಕಂದಕಕ್ಕೆ ಉರುಳಿದ್ದ ಬೋಲೇರೋ ಜೀಪ್‌: ಸ್ಥಳದಲ್ಲೇ ಮಹಿಳೆ ಸಾವು

 

ಇತ್ತೀಚಿನ ಸುದ್ದಿ

Exit mobile version