ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ - Mahanayaka
3:29 AM Saturday 18 - October 2025

ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

sathish jarakiholi
29/03/2021

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೇ ಕಣಕ್ಕಿಳಿದಿದ್ದು, ಇಂದು ಕಾಂಗ್ರೆಸ್ ನಾಯಕ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.


Provided by

ನಗರದ ಆರ್ ಟಿಒ ನಗರದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಹಸಿರು ಶಾಲು ಧರಿಸಿ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ  ಜೊತೆಗಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರ ಇದೀಗ ಪ್ರತಿಷ್ಠೆಯ ಕಣವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಿತ್ತು. ಹೀಗಾಗಿ ಈ ಬಾರಿ ಪ್ರಬಲ ಅಭ್ಯರ್ಥಿಯಾಗಿರುವ ಸತೀಶ್ ಜಾರಕಿಹೊಳಿ ಅವರನ್ನೇ ಕಾಂಗ್ರೆಸ್ ಕಣಕ್ಕಿಳಿಸಿದೆ. ಹೀಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂಬಂತಹ ವಾತಾವರಣ ಸೃಷ್ಟಿಯಾಗಿದೆ.

ಸಿಡಿ ಪ್ರಕರಣದಲ್ಲಿ “ಮಹಾನಾಯಕ” ಪದ ಬಳಕೆಯ ವಿರುದ್ಧ ನಟ ಪ್ರಥಮ್ ಆಕ್ರೋಶ

ಇತ್ತೀಚಿನ ಸುದ್ದಿ