ನಾಮಪತ್ರ ವಾಪಸ್ ಪಡೆದ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮುನಿರತ್ನ!
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಮುನಿರತ್ನ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮುನಿರತ್ನ ಎಂಬವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಪಕ್ಷೇತರ ಅಭ್ಯರ್ಥಿ ಮುನಿರತ್ನ ಇಬ್ಬರೂ ನಾಮಪತ್ರ ಸಲ್ಲಿಸಿದ್ದರು. ಇದೀಗ ಪಕ್ಷೇತರ ಅಭ್ಯರ್ಥಿ ಮುನಿರತ್ನ ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದಾರೆ.
ಮುನಿರತ್ನ ಮಾತ್ರವಲ್ಲದೇ ಪಕ್ಷೇತರವಾಗಿ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದ ಸಿ. ಆನಂದ್ ಮತ್ತು ಆರ್. ಕುಮಾರ್ ಎಂಬವರೂ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಇಬ್ಬರು ಮುನಿರತ್ನ ಹೆಸರಿನ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಇದರಿಂದ ಬಿಜೆಪಿಯ ಅಭ್ಯರ್ಥಿ ಮುನಿರತ್ನ ಅವರ ಮತಗಳು ಒಡೆದು ಹೋಗಲಿದೆ ಎಂದು ಹೇಳಲಾಗಿತ್ತು.
ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ನವೆಂಬರ್ 3ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಆರ್. ಆರ್. ನಗರದಲ್ಲಿ ಮತದಾನ ನಡೆಯಲಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.