11:45 AM Thursday 4 - September 2025

ನಂದಿನಿ ಹಾಲಿನ ದರ 22ರಿಂದ 24 ರೂ.ಗೆ ಏರಿಕೆ!

nandini
25/06/2024

ಬೆಂಗಳೂರು: ನಂದಿನಿ ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.

ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ ​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ (ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ಅನ್ವಯವಾಗಲಿದೆ ಎಂದು ತಿಳಿಸಿದರು.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ ನಲ್ಲಿ ಅಮುಲ್ ಒಂದು ಲೀಟರ್ ​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಭೀಮಾನಾಯ್ಕ್  ಹೇಳಿದ್ದಾರೆ.

ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version