ಸಿಡಿ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಲಾಗಿತ್ತು | ಯೂಟರ್ನ್ ಹೊಡೆದ ಯುವತಿ - Mahanayaka

ಸಿಡಿ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಲಾಗಿತ್ತು | ಯೂಟರ್ನ್ ಹೊಡೆದ ಯುವತಿ

ramesh jarakiholi
12/04/2021

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಯುವತಿಯು ಯೂಟರ್ನ್ ಹೊಡೆದಿದ್ದಾಳೆ.

ನನ್ನನ್ನು ಹನಿ ಟ್ರ್ಯಾಪ್ ಗೆ ಸಿಲುಕಿಸಿ ಈ ರೀತಿ ಕೃತ್ಯ ಎಸಗಲಾಗಿದೆ. ಕಿಂಗ್ ಪಿನ್ ಗಳಾದ ಮಾಜಿ ಪತ್ರಕರ್ತ ನರೇಶ್ ಹಾಗೂ ಶ್ರವಣ್ ಹನಿಟ್ರ್ಯಾಪ್ ಗೆ ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಯುವತಿ ಆರೋಪಿಸಿರುವುದಾಗಿ ವರದಿಯಾಗಿದೆ.

ಯುವತಿ ನೀಡಿದ ಹೇಳಿಕೆಯ ಮೇರೆಗೆ ಎಸ್ ಐಟಿ ಅಧಿಕಾರಿಗಳು ಮತ್ತೊಮ್ಮೆ ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ