ನಾನು ದನದ ಮಾಂಸ ತಿನ್ನುತ್ತೇನೆ, ಅದನ್ನು ಕೇಳಲು ನೀನ್ಯಾರು? | ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ? - Mahanayaka
8:27 AM Monday 15 - September 2025

ನಾನು ದನದ ಮಾಂಸ ತಿನ್ನುತ್ತೇನೆ, ಅದನ್ನು ಕೇಳಲು ನೀನ್ಯಾರು? | ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?

28/12/2020

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, “ನಾನು ದನದ ಮಾಂಸ ತಿನ್ನುತ್ತೇನೆ, ನನ್ನ ಆಹಾರ ಪದ್ಧತಿ ನನ್ನ ಹಕ್ಕು. ಅದನ್ನು ಕೇಳಲು ನೀನು ಯಾರು? ಎಂದು ನಾನು ಅಧಿವೇಶನದಲ್ಲಿ ಕೂಡ ಹೇಳಿದ್ದೇನೆ ಎಂದು ಹೇಳಿದ್ದಾರೆ.


Provided by

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿಯ ಪಕ್ಷದ ಕಚೇರಿಯಲ್ಲಿ  ಕಾಂಗ್ರೆಸ್ ನ 136 ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವು ವಿಚಾರಗಳ ಬಗ್ಗೆ ನಮಗೆ ಮೊದಲು ಸ್ಪಷ್ಟತೆ ಇರಬೇಕು. ಗೋ ಮಾತೆಯನ್ನು ನಾವು ಪೂಜಿಸುತ್ತೇವೆ ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಈ ವಾಸ್ತವವನ್ನು ಕಾಂಗ್ರೆಸ್ ಜನತೆಗೆ ತಿಳಿಸಬೇಕು. ಇದನ್ನು ಕಾಂಗ್ರೆಸ್ ನವರು ಸ್ಪಷ್ಟವಾಗಿ ಜನತೆ ತಿಳಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಜನರ ಪ್ರಶ್ನೆಗಳಿಗೆ ಉತ್ತರಿಸಬೇಕು. ಆದರೆ ಅವರು ಮೌನವಾಗುತ್ತಿದ್ದಾರೆ. ಕಾಂಗ್ರೆಸ್ ಗೆ ಹಿನ್ನಡೆಯಾದರೆ,  ಬಡವರಿಗೆ, ರೈತರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ, ದಲಿತರಿಗೆ ಹಿನ್ನಡೆಯಾದಂತೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.

ಇತ್ತೀಚಿನ ಸುದ್ದಿ