ಪ್ರಧಾನಿಯಾಗಿ ಇಂದು ಮೋದಿ ಪ್ರಮಾಣ ವಚನ: ಗಾಂಧಿ, ವಾಜಪೇಯಿಗೆ ಗೌರವ ನಮನ ಸಲ್ಲಿಸಿದ ನಮೋ

09/06/2024

ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಂದು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ರಾಷ್ಟ್ರಗಳ ಮುಖ್ಯಸ್ಥರು ಆಗಮಿಸುವ ಸಾಧ್ಯತೆ ಇದೆ.

ಇನ್ನು ಈ ಕಾರ್ಯಕ್ರಮಕ್ಕೂ ಮುನ್ನ ಅವರು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಮತ್ತು ದೆಹಲಿಯ ಸದೈವ್ ಅಟಲ್ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. ನಂತರ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಅಲ್ಲಿ ಪುಷ್ಪಗುಚ್ಛ ಅರ್ಪಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಯುದ್ಧ ಸ್ಮಾರಕದಲ್ಲಿ ಮೋದಿಯವರ ಪಕ್ಕದಲ್ಲಿ ಕಾಣಿಸಿಕೊಂಡರು.
ರಾಷ್ಟ್ರಪತಿ ಭವನದಲ್ಲಿ ಸಂಜೆ 7.15 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಮತ್ತು ಅವರ ಮಂತ್ರಿಮಂಡಲಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version