ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು - Mahanayaka
4:23 AM Wednesday 15 - October 2025

ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು

chethan ahimsa
25/02/2022

ಬೆಂಗಳೂರು:  ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಚೇತನ್ ಅಹಿಂಸಾ ಅವರಿಗೆ  ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.


Provided by

ನ್ಯಾಯಾಧೀಶರ ಕುರಿತು ನಟ ಚೇತನ್ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತವಾಗಿ  ಕೇಸ್ ದಾಖಲಿಸಿಕೊಂಡು ಬಂಧಿಸಿದ್ದರು.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಚೇತನ್ ಅವರಿಗೆ ನ್ಯಾಯಾಲಯವು ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ನಟ ಚೇತನ್ ಅವರನ್ನು ಅಪಹರಿಸಿದ ರೀತಿಯಲ್ಲಿ ಪೊಲೀಸರು ಬಂಧಿಸಿದಂತೆ ಬಂಧಿಸಿರುವ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆದಿದ್ದು, ಪೊಲೀಸರ ಕ್ರಮ ಸರಿಯಾದುದ್ದಲ್ಲ ಎಂದು ವಿವಿಧ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಇನ್ನೂ ಚೇತನ್ ಅವರಿಗೆ ಜಾಮೀನು ದೊರೆತಿರುವ ಬೆನ್ನಲ್ಲೇ ಅವರ ಚಳುವಳಿಯ ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ

ಇಂದು ರಾತ್ರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಉಕ್ರೇನ್‍ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ

ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣ ವಸೂಲಿ: ಟೀ ಮಾರಾಟಗಾರ ಸೆರೆ

ಇತ್ತೀಚಿನ ಸುದ್ದಿ