250ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಕೊರೊನಾಕ್ಕೆ ಬಲಿ - Mahanayaka
10:28 AM Thursday 16 - October 2025

250ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಕೊರೊನಾಕ್ಕೆ ಬಲಿ

shankhanada aravind
07/05/2021

ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ನಟರ ಜೊತೆಗೆ ನಟಿಸಿದ್ದ ಹಿರಿಯ ನಟ ಶಂಖನಾದ ಅರವಿಂದ್ ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.


Provided by

ಜನವರಿ 23ಕ್ಕೆ ಉಸಿರಾಟದ ತೊಂದರೆಯಿಂದ ಅರವಿಂದ್ ಅವರ ಪತ್ನಿ ಮೃತಪಟ್ಟಿದ್ದರು. ಎರಡು ದಿನಗಳ ಹಿಂದೆ ಕೊರೊನಾ ಹಿನ್ನೆಲೆಯಲ್ಲಿ ಅರವಿಂದ್ ಕೂಡ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮಧ್ಯಾಹ್ನ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಕನ್ನಡದಲ್ಲಿ 250ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಅಪರೂಪದ ನಟ ಶಂಖನಾದ ಅರವಿಂದ್ ಆಗಿದ್ದು, ತಮ್ಮ 70ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಬೆಟ್ಟದ ಹೂವು ಚಿತ್ರದಲ್ಲಿ ಕೂಡ ಅವರು ಅಭಿನಯಿಸಿದ್ದರು. ಇನ್ನೂ ದಿವಂಗತ ಕಾಶಿನಾಥ್ ಅವರ ಆಪ್ತರೂ ಆಗಿದ್ದು, ಅವರ ಚಿತ್ರದಲ್ಲಿ ಹೆಚ್ಚು ನಟಿಸಿದ್ದರು.

ಇತ್ತೀಚಿನ ಸುದ್ದಿ