ಮಲ್ಪೆ: ರಾಷ್ಟ್ರೀಯ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ

sucide
05/09/2023

ಮಲ್ಪೆ: ವೈಯಕ್ತಿಕ ಕಾರಣದಿಂದ ಮನನೊಂದ ಯುವ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣಾಗಿರುವ ಘಟನೆ ಮಲ್ಪೆಯ ಶಾಂತಿನಗರ ಎಂಬಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ಶಾಂತಿನಗರದ ನಿವಾಸಿ ವೀರಜ್ ಮೆಂಡನ್(29) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version