ವಿದೇಶದಲ್ಲಿ ಅಧ್ಯಯನ ಮಾಡುವವರಿಗೆ ಸರ್ಕಾರದಿಂದ 5–10 ಲಕ್ಷ ರೂ. ಆರ್ಥಿಕ ಸಹಾಯಧನ: ಅರ್ಜಿ ಸಲ್ಲಿಸಿ
National Overseas Scholarship by Department of Minority 2024 — ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಲಾಯದಿಂದ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆರ್ಥಿಕ ನೆರವು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ 5ಲಕ್ಷ ರೂ. ಯಿಂದ 10ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುವುದು. ಅರ್ಜಿ ಹೇಗೆ ಸಲ್ಲಿಸಬೇಕು? ಏನೆಲ್ಲಾ ಅರ್ಹತೆ ಹೊಂದಿರಬೇಕು? ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ಇಲ್ಲಿದೆ..
ಅರ್ಹತೆಗಳು:
ವಿದೇಶ ಉನ್ನತ ವ್ಯಾಸಂಗಕ್ಕಾಗಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 38 ವರ್ಷದ ಒಳಗಿರಬೇಕು ಮತ್ತು ಹಿಂದಿನ ಶೈಕ್ಷಣಿಕ ಕೋರ್ಸ್ ನಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು. ಕುಟುಂಬ ವಾರ್ಷಿಕ ಆಧಾಯವು 4 ಲಕ್ಷ ರೂ. ಒಳಗಿರಬೇಕು. ಪ್ರಮುಖ ವಿಷಯವೇನೆಂದರೆ ಒಂದು ಕುಟುಂಬದಲ್ಲಿ ಒಬ್ಬ ಸದಸ್ಯ ಮಾತ್ರ ಈ ಯೋಜನೆಯ ಲಾಭ ಪಡೆಯಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ — 31 ಡಿಸೆಂಬರ್ 2024
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಮುನ್ನ ಕೆಳಗಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅರ್ಹತೆಗಳ ಸಂಪೂರ್ಣ ವಿವರ ತಿಳಿಯಿರಿ. ನಂತರದಲ್ಲಿ ಅಲ್ಲಿಯೇ ಇರುವ ಅಪ್ಲೈ ಬಟನ್ ಮೇಲೆ ಒತ್ತಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ: https://dom.karnataka.gov.in/new-page/online%20application/en
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























