3:56 PM Thursday 16 - October 2025

ಉಕ್ರೇನ್: ನವೀನ್ ಬಲಿಯಾದ ಸ್ಥಳದಿಂದ 100 ಮೀಟರ್ ಅಂತರದಲ್ಲಿ ಸಿಲುಕಿದ್ದಾರೆ ಉಜಿರೆ ವಿದ್ಯಾರ್ಥಿನಿ!

ukraine war
03/03/2022

ಬೆಳ್ತಂಗಡಿ:  ಉಕ್ರೇನ್‌ ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದು, ಈ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವಿದ್ಯಾರ್ಥಿನಿ ಹೀನಾ ಫಾತಿಮಾ  ಎಂಬವರು ಸಿಲುಕಿದ್ದು ಅವರು ಅಪಾಯದ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ.

ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಉಜಿರೆಯ ಟಿ.ಬಿ ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿಯಾಗಿದ್ದು, ಇದೀಗ ಯುದ್ಧಗ್ರಸ್ಥ ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿದ್ದಾರೆ.

ವರದಿಗಳ ಪ್ರಕಾರ,  ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಅವರು ಮೃತಪಟ್ಟ ನವೀನ್ ಅವರ ಬ್ಯಾಚ್ ನಲ್ಲೇ ಕಲಿಯುತ್ತಿದ್ದಾರೆ ಎಂದು ಅವರ ಮಾವ, ಉದ್ಯಮಿ ಆಬಿದ್ ಅಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ನವೀನ್ ಸಾವಿಗೆ ಕಾರಣವಾದ ರಷ್ಯಾ ನಡೆಸಿದ ಗಂಭೀರ ಸ್ಪೋಟ ಇವರು ಇರುವ ಕಟ್ಟಡಕ್ಕಿಂತ ಕೇವಲ 100 ಮೀ. ದೂರದಲ್ಲಿರುವ  ಕಟ್ಟಡವೊಂದರ ತಳಹಂತದ ಬಂಕರ್ ನಲ್ಲಿ ಹೀನಾ ಫಾತಿಮಾ ಸೇರಿದಂತೆ 7 ಕನ್ನಡಿಗ ವಿದ್ಯಾರ್ಥಿಗಳಿದ್ದು, ಸದ್ಯ ಸುರಕ್ಷಿತವಾಗಿದ್ದಾರೆ. ಆದರೆ, ರಷ್ಯಾದ ದಾಳಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಆತಂಕಕ್ಕೀಡಾಗಿದ್ದಾರೆ ಎನ್ನಲಾಗಿದೆ.

ವಿದೇಶಾಂಗ ಇಲಾಖೆ ವಿದ್ಯಾರ್ಥಿಗಳ ಸಂಪರ್ಕ ಸಾಧಿಸಿದ್ದು, ಅವರಿಗೆ ಧೈರ್ಯತುಂಬುವ ಕಾರ್ಯ ಮಾಡುತ್ತಿದೆ. ರೈಲು ಮಾರ್ಗದ ಮೂಲಕ 1000 ಕಿ‌.ಮೀ. ದೂರದಲ್ಲಿರುವ ಲಿವಿನ್ ಎಂಬ ಗಡಿ ಪ್ರದೇಶಕ್ಕೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ  ಎನ್ನಲಾಗುತ್ತಿದೆ.  ಒಂದು ದಿನ ಪ್ರಯಾಣ ನಡೆಸಿ ಗಡಿ ಸೇರಿದರೆ ಅಲ್ಲಿಂದ ವಿಮಾನದ ಮೂಲಕ ಅವರನ್ನು ಭಾರತಕ್ಕೆ ಕರೆ ತರುವ ಬಗ್ಗೆ ಎಂಬೆಸ್ಸಿ ಯೋಜನೆ ರೂಪಿಸಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಉಕ್ರೇನ್ ನಿಂದ ಗಡಿ ಪ್ರದೇಶಕ್ಕೆ ತಲುಪಲು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ.  ನಿರಂತರ ಬಾಂಬ್ ಹಾಗೂ ಶೆಲ್ ಗಳ ದಾಳಿಯಿಂದಾಗಿ ತಾವಿರುವ ಪ್ರದೇಶಗಳಿಂದ ಹೊರ ಬರಲಾಗದೇ ಸಂಕಷ್ಟದಲ್ಲಿದ್ದಾರೆ. ವಿದ್ಯಾರ್ಥಿಗಳು ಆರೋಪಿಸುತ್ತಿರುವಂತೆ ಭಾರತದ ಎಂಬೆಸ್ಸಿ ಉಕ್ರೇನ್ ನೊಳಗೆ ವಿದ್ಯಾರ್ಥಿಗಳಿಗೆ ನೆರವು ನೀಡಲು ವಿಫಲವಾಗಿದೆ. ವಿದ್ಯಾರ್ಥಿಗಳೇ ಪ್ರಾಣವನ್ನು ಒತ್ತೆ ಇಟ್ಟು ಗಡಿ ಪ್ರದೇಶದ ವರೆಗೆ ಪ್ರಯಾಣಿಸುವಂತಾಗಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನವೀನ್ ಸಾವಿಗೆ ನೀಟ್ ವ್ಯವಸ್ಥೆಯೇ ಕಾರಣ: ನೀಟ್ ರದ್ದುಗೊಳಿಸಲು ಬೃಹತ್ ಅಭಿಯಾನ

ಉಕ್ರೇನ್ ಒಳಗಡೆ ನಮಗೆ ಸರ್ಕಾರ ಯಾವುದೇ ರಕ್ಷಣೆ ನೀಡಲಿಲ್ಲ | ಕೇಂದ್ರ ಸರ್ಕಾರದ ನಡೆಯ ಬಗ್ಗೆ ವಿದ್ಯಾರ್ಥಿಗಳಿಂದ ಬೇಸರ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್  ಗೆ ಇದೆ ಹಲವು ಗುಪ್ತ ಕಾಯಿಲೆಗಳು!

ಅಣುಬಾಂಬ್ ಪ್ರಯೋಗಕ್ಕೆ ಸಿದ್ಧವಾಗ್ತಿದೆಯಾ ರಷ್ಯಾ? |  ತನ್ನ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಪುಟಿನ್

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ: ಸುರಕ್ಷಿತವಾಗಿ ಕೀವ್ ತೊರೆದ ಭಾರತೀಯರು; ಕಾರ್ಯಾಚರಣೆಗೆ 26 ವಿಮಾನ ಬಳಕೆ

ಇತ್ತೀಚಿನ ಸುದ್ದಿ

Exit mobile version