ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಬಂಧನ - Mahanayaka

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಬಂಧನ

navab malik
24/02/2022

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.


Provided by

ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಿದೆ.

ಜಾರಿ ನಿರ್ದೇಶನಾಲಯ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ನವಾಬ್ ಮಲಿಕ್ ಅವರು ಇಂದು ಬೆಳಗ್ಗೆ 8 ಗಂಟೆಗೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದರು. ವಿಚಾರಣೆ ಬಳಿಕ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮಹಾ ಸಚಿವನನ್ನು ಬಂಧಿಸಿದೆ.

ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟು, ಭೂಗತ ಜಗತ್ತಿನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಫೆ. 15ರಂದು ನವಾಬ್ ಮಲಿಕ್ ವಿರುದ್ಧ ಮುಂಬೈನಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಇಡಿ ಈ ಕ್ರಮ ಕೈಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚಿನ್ನದಂಗಡಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನ ಕಳವು ಮಾಡಿದ ಕಳ್ಳರು!

ಈಶ್ವರಪ್ಪ, ಮಲ್ಲಿಕಾರ್ಜುನ ಗೌಡ, ಸೋ ಕಾಲ್ಡ್ ದೇಶಭಕ್ತರ ಮೇಲೆ ಯಾಕೆ ಸುಮೊಟೊ ದಾಖಲಾಗುತ್ತಿಲ್ಲ?

ಉತ್ತರ ಕನ್ನಡದಲ್ಲಿ ಭೂ ಕುಸಿತ: ಗ್ರಾಮಸ್ಥರಲ್ಲಿ ಆತಂಕ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಕಾಲೇಜು ಕಾಂಪೌಂಡ್ ಗೋಡೆ ಕುಸಿತ

ಮಂತ್ರಾಲಯಕ್ಕೆ ಹೊರಟಿದ್ದ ಕೆ ಎಸ್‌ ಆರ್‌ ಟಿಸಿ ಬಸ್​ ನಲ್ಲಿ​ ಕುಸಿದುಬಿದ್ದು ಕಂಡಕ್ಟರ್​ ಸಾವು

ಇತ್ತೀಚಿನ ಸುದ್ದಿ