ಎನ್‌ ಸಿಪಿ ಚಿಹ್ನೆ ಯಾರಿಗೂ ಸಿಗಲ್ಲ: ಸೋದರಳಿಯ ಅಜಿತ್ ಗೆ ಶರದ್ ಪವಾರ್ ಕೌಂಟರ್..!

05/07/2023

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರಳಿಯ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎನ್ ಸಿಪಿ ಪಕ್ಷದ ಚುನಾವಣಾ ಚಿಹ್ನೆಯಾದ ಗಡಿಯಾರವು ತನ್ನ ಬಳಿ ಇರುತ್ತದೆ. ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕೌಂಟರ್ ಕೊಟ್ಟಿದ್ದಾರೆ.

ಬಂಡಾಯ ಎನ್ ಸಿಪಿ ನಾಯಕ ಅಜಿತ್ ಪವಾರ್ ಚುನಾವಣಾ ಆಯೋಗವನ್ನು ಸಂಪರ್ಕಿಸಿದ ನಂತರ ಶರದ್ ಪವಾರ್ ಈ ಹೇಳಿಕೆ ನೀಡಿದ್ದಾರೆ.  ದಕ್ಷಿಣ ಮುಂಬೈನ ಚವಾಣ್ ಕೇಂದ್ರದಲ್ಲಿ ಸುಮಾರು 53 ಎನ್ ಸಿಪಿ ಶಾಸಕರು ಹಾಜರಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ 83 ವರ್ಷದ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಎನ್ ಸಿಪಿಯನ್ನು ಭ್ರಷ್ಟ ಪಕ್ಷ ಎಂದು ಕರೆದರೂ ಅಧಿಕಾರಕ್ಕಾಗಿ ಬಿಜೆಪಿಯೊಂದಿಗೆ ಹೋಗಿದ್ದಕ್ಕಾಗಿ ತಮ್ಮ ಸೋದರಳಿಯನನ್ನು ಟೀಕಿಸಿದರು.

ಅಜಿತ್ ಪವಾರ್ ನೇತೃತ್ವದ ಬಣವು ಚುನಾವಣಾ ಆಯೋಗವನ್ನು ಸಂಪರ್ಕಿಸಿದ ಬಗ್ಗೆ, ಹಿರಿಯ ರಾಜಕಾರಣಿ ಪಕ್ಷದ ಚಿಹ್ನೆಯನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ತಮ್ಮ ಬೆಂಬಲಿಗರಿಗೆ ಭರವಸೆ ನೀಡಿದರು.

“ಕೆಲವು ದಿನಗಳ ಹಿಂದೆ, ಅವರು (ಅಜಿತ್ ಪವಾರ್) ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದರು. ಇಷ್ಟು ವರ್ಷಗಳಲ್ಲಿ ಅಂತಹ ಮುಖ್ಯಮಂತ್ರಿಯನ್ನು ನೋಡಿಲ್ಲ ಎಂದಿದ್ದ ಅಜಿತ್ ಪವಾರ್ ಇಂದು ಅವರು ಅವರೊಂದಿಗೆ ಸೇರಿಕೊಂಡಿದ್ದಾರೆ” ಎಂದು ಶರದ್ ಪವಾರ್ ವ್ಯಂಗ್ಯವಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version