5:19 PM Wednesday 20 - August 2025

ಮುಸ್ಲಿಮ್ ಹುಡುಗಿಯರ ಮದುವೆ ವಯಸ್ಸು ಏರಿಕೆಗೆ ಮಹಿಳಾ ಆಯೋಗ ಸುಪ್ರೀಂ ಕೋರ್ಟ್ ಗೆ ಮನವಿ

suprim court
10/12/2022

ನವದೆಹಲಿ: ಫೋಕ್ಸೋ ಕಾಯ್ದೆ,  ಐಪಿಸಿ ಮತ್ತು ಮಕ್ಕಳ ವಿವಾಹ ನಿಷೇಧ ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೇ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು. ಸಂವಿಧಾನದ 14, 15 ಮತ್ತು 21ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಿ, ಎತ್ತಿಹಿಡಿಯಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಎಲ್ಲ ಸಮುದಾಯಗಳ ಯುವತಿಯರ ವಿವಾಹ ವಯಸ್ಸನ್ನು ಧರ್ಮಾತೀತವಾಗಿ 18 ವರ್ಷಕ್ಕೆ ನಿಗದಿ ಪಡಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು,  ಈ ಅರ್ಜಿಯನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಈ ಬಗ್ಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಗೆ  ನೋಟೀಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠ ರಾಷ್ಟ್ರೀಯ ಮಹಿಳಾ ಆಯೋಗ ಅರ್ಜಿಯನ್ನು ವಿಚಾರಣೆ ನಡೆಸಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version