ಕಂಗನಾ ರಾವತ್ ಬಗ್ಗೆ ಬರೆದಿದ್ದು ತಪ್ಪಾಯ್ತು: ಕಾಂಗ್ರೆಸ್ ನ ಸುಪ್ರಿಯಾ ಶ್ರಿನಾಟೆ ವಿರುದ್ಧ ಎನ್ ಸಿಡಬ್ಲ್ಯೂ ಗರಂ
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಮಹಿಳಾ ಆಯೋಗವು ಸುಪ್ರಿಯಾ ಶ್ರಿನಾಟೆ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಕಾಂಗ್ರೆಸ್ ನಾಯಕಿಯ ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಮಹಿಳೆಯರ ಘನತೆಯನ್ನು ದುರ್ಬಲಗೊಳಿಸುತ್ತದೆ ಎಂದು ಎನ್ ಸಿಡಬ್ಲ್ಯೂ ಎಕ್ಸ್ ಪೋಸ್ಟ್ ನಲ್ಲಿ ಹೇಳಿದೆ.
ಸಾಮಾಜಿಕ ಮಾಧ್ಯಮದಲ್ಲಿ ಕಂಗನಾ ರಾವತ್ ಬಗ್ಗೆ ಅಸಭ್ಯ ಮತ್ತು ಅವಹೇಳನಕಾರಿ ಕಾಮೆಂಟ್ ಗಳನ್ನು ಮಾಡಿದ ಸುಪ್ರಿಯಾ ಶ್ರಿನಾಟೆ ಮತ್ತು ಎಚ್ಎಸ್ ಅಹಿರ್ ಅವರ ಅವಮಾನಕರ ನಡವಳಿಕೆಯ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ. ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಮಹಿಳೆಯರ ಘನತೆಯನ್ನು ದುರ್ಬಲಗೊಳಿಸುತ್ತದೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಭಾರತದ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದು, ಅವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಎಲ್ಲಾ ಮಹಿಳೆಯರಿಗೆ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳುವಂತೆ ಆಯೋಗವು ಪ್ರತಿಯೊಬ್ಬರನ್ನು ಒತ್ತಾಯಿಸಿದೆ.
ಈ ಮಧ್ಯೆ ಸುಪ್ರಿಯಾ ಶ್ರಿನಾಟೆ ಅವರ ಪೋಸ್ಟ್ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಬಿಜೆಪಿಯ ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮೇಲ್ವಿಚಾರಣೆ ನಡೆಸುತ್ತಿರುವ ಅಮಿತ್ ಮಾಳವೀಯ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರಿನಾಟೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























