10:40 AM Saturday 23 - August 2025

ಹಂತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕು ಚಿಕಿತ್ಸೆ

hospital
12/12/2022

ಮೂಡಿಗೆರೆ ತಾಲ್ಲೂಕಿನ ಹಂತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ವೈದ್ಯರು, ಸಹಾಯಕಿಯರು, ಸಿಬ್ಬಂದಿಗಳು ಬಾರದೇ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ.

ರೋಗಿಗಳು ಚಿಕಿತ್ಸೆಪಡೆಯಲು ಹೋದಾಗ ಯಾವುದೇ ಕರ್ತವ್ಯ ನಿರತ ಅಧಿಕಾರಿಗಳು,ಸಿಬ್ಬಂದಿ ವರ್ಗದವರು ಕಾರ್ಯ ನಿರ್ವಹಿಸದೆ,ಆಸ್ಪತ್ರೆಯಲ್ಲಿ ಅಟೆಂಡರ್ ಕೆಲಸಗಾರರನ್ನು ಬಿಟ್ಟು ಹೋಗುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದ್ದರಿಂದ ಸುತ್ತಮುತ್ತಲಿನ ಗ್ರಾಮಗಳ ರೋಗಿಗಳು ಆಸ್ಪತ್ರೆಗೆ ಬಂದು ಚಿಕತ್ಸೆಗಾಗಿ‌ ಕಾದು ಹಿಂದಿರುಗುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ‌.

ಈ ಬಗ್ಗೆ ಮಾತನಾಡಿದ ಗ್ರಾ.ಪಂ ಸದಸ್ಯ ವಿನೋದ್ ಕಣಚೂರು,  ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version