4:43 AM Wednesday 22 - October 2025

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ ಭಾರತೀಯನ ಕಮಾಲ್: ಚಿನ್ನ ಗೆದ್ದ ನೀರಜ್ ಚೋಪ್ರಾ; ಪದಕ ಗೆದ್ದ ಮೊದಲ ಭಾರತೀಯ ಇವರೇ..!

28/08/2023

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.

ಶುಕ್ರವಾರ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಮೊದಲ ಪ್ರತಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದರು.

2024 ರಲ್ಲಿ ಪ್ಯಾರಿಸ್​ನಲ್ಲಿ ನಡೆಯಲಿರುವ ಒಲಿಂಪಿಕ್​ ಗೇಮ್ಸ್​ಗೆ ನೀರಜ್ ಚೋಪ್ರಾ ಅರ್ಹತೆ ಪಡೆದುಕೊಂಡಿದ್ದಾರೆ. ಒಲಿಂಪಿಕ್ಸ್​ ಅರ್ಹತೆಗಾಗಿ ಈಗಾಗಲೇ ವಿಂಡೋ ತೆರೆಯಲಾಗಿದ್ದು, ಇದಕ್ಕಾಗಿ 85.50 ಮೀಟರ್​ ದೂರವನ್ನು ನಿಗದಿ ಮಾಡಲಾಗಿತ್ತು. ಅದರಂತೆ ಫೈನಲ್​ನ ಅರ್ಹತಾ ಸುತ್ತಿನಲ್ಲಿ 88.77 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ಒಲಿಂಪಿಕ್ಸ್​ಗೆ ನೇರ ಅರ್ಹತೆ ಪಡೆದುಕೊಂಡಿದ್ದರು.

2021 ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್​ನ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದರು. ಅಂದು ಬರೋಬ್ಬರಿ 87.58 ಮೀ. ದೂರ ಭರ್ಜಿ ಎಸೆಯುವ ಮೂಲಕ ಭಾರತಕ್ಕೆ ಸ್ವರ್ಣ ಪದಕ ತಂದುಕೊಟ್ಟಿದ್ದರು. ಇದೀಗ ಪ್ಯಾರಿಸ್ ಒಲಿಂಪಿಕ್ಸ್​ಗೆ ನೇರ ಅರ್ಹತೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

Exit mobile version