ನೀಟ್ ವಂಚನೆ ಪ್ರಕರಣ: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು - Mahanayaka

ನೀಟ್ ವಂಚನೆ ಪ್ರಕರಣ: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು

18/05/2024

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಅನೇಕರಿಗೆ ಪರಿಚಿತವಾಗಿದೆ. ಯಾಕೆಂದರೆ ಇದು ದೇಶದ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಪ್ರತಿ ವರ್ಷ, ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಭರವಸೆಯೊಂದಿಗೆ ಸಾಕಷ್ಟು ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ) ಪರೀಕ್ಷೆಗೆ ಹಾಜರಾಗುತ್ತಾರೆ.


Provided by

ಕಟ್ಟುನಿಟ್ಟಾದ ಭದ್ರತಾ ನಿಯಮಗಳ ಹೊರತಾಗಿಯೂ ಮೇ 5 ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಮೋಸ ಮಾಡಿರೋದು ಬಯಲಾಗಿದೆ. ಹೀಗಾಗಿ ದೆಹಲಿ ಪೊಲೀಸರು ಕ್ರಮ ಕೈಗೊಂಡಿದ್ದು ಮೋಸ ಮಾಡಿದ ಗ್ಯಾಂಗ್ ನ ನಾಲ್ವರನ್ನು ಬಂಧಿಸಿದ್ದಾರೆ.
ನೀಟ್ ಪರೀಕ್ಷೆಯ ಸಮಯದಲ್ಲಿ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ನೇತೃತ್ವದ ನವದೆಹಲಿ ಜಿಲ್ಲೆಯ ವಿಶೇಷ ಸಿಬ್ಬಂದಿ ವಂಚನೆಯ ವಿರುದ್ಧ ಕಠಿಣ ಕ್ರಮ ಕೈಗೊಂಡರು. ಸರ್ಕಾರಿ ವೈದ್ಯಕೀಯ ಕಾಲೇಜುಗಳ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿದಂತೆ ಪ್ರಶ್ನೆ ಪತ್ರಿಕೆ ಬಿಡಿಸುವಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ನಾಲ್ಕು ಮೊಬೈಲ್ ಫೋನ್ ಗಳು ಮತ್ತು ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 5 ರಂದು ಭಾರತೀಯ ವಿದ್ಯಾಭವನ ಮೆಹ್ತಾ ವಿದ್ಯಾಲಯದಲ್ಲಿ ನಡೆದ ನೀಟ್ ಪರೀಕ್ಷೆಯ ಸಮಯದಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಡೇಟಾ ಹೋಲಿಕೆಯಾಗುತ್ತಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವರನ್ನು ಬಂಧಿಸಲಾಗಿದ್ದು, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ