ನೀಟ್ ವಿವಾದ: ನನ್ನ ಜವಾಬ್ದಾರಿ ಮತ್ತು ಪಾತ್ರ ಬದಲಾಗಿದೆ ಎಂದ ರಾಘವ್ ಚಡ್ಡಾ

raghav chadha
31/07/2026

ನವದೆಹಲಿ: ರಾಜ್ಯಸಭೆಯಲ್ಲಿ ನೀಟ್ (NEET) ಪೇಪರ್ ಸೋರಿಕೆ ಮತ್ತು ಪರೀಕ್ಷಾ ವ್ಯವಸ್ಥೆಯ ಅಕ್ರಮಗಳ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ, ಸಂಸತ್ ಸದಸ್ಯ ರಾಘವ್ ಚಡ್ಡಾ ಮೌನ ಮುರಿದ್ದಾರೆ. ತಮ್ಮ ಪಾತ್ರ ಮತ್ತು ಜವಾಬ್ದಾರಿ ಬದಲಾಗಿರುವುದರಿಂದ ಈ ಬಗ್ಗೆ ಸ್ಪಷ್ಟನೆ ನೀಡುವುದಾಗಿ ಅವರು ತಿಳಿಸಿದ್ದಾರೆ.

ತಾವು ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ವಿವಿಧ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಮತ್ತು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ತಮ್ಮ ಕೆಲಸವಾಗಿತ್ತು. ಆದರೆ ಈಗ ತಮ್ಮ ಜವಾಬ್ದಾರಿ ಬದಲಾಗಿದ್ದು, ಕೇವಲ ಪ್ರಶ್ನೆ ಕೇಳುವುದಲ್ಲದೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದಾಗಿದೆ ಎಂದು ರಾಘವ್ ಚಡ್ಡಾ ಸ್ಪಷ್ಟಪಡಿಸಿದ್ದಾರೆ.

ಕೇವಲ ಕ್ಯಾಮೆರಾ ಮುಂದೆ ಬಂದು ಮಾತನಾಡಿ ಹೆಡ್ಲೈನ್ ಗಳಲ್ಲಿ ಕಾಣಿಸಿಕೊಳ್ಳುವುದು ತಮ್ಮ ಉದ್ದೇಶವಲ್ಲ. ಬದಲಿಗೆ ಸಿಸ್ಟಮ್ ಅನ್ನು ಸರಿಪಡಿಸುವುದು ಮತ್ತು ಪರಿಣಾಮಕಾರಿ ಫಲಿತಾಂಶಗಳನ್ನು ತರುವುದೇ ತಮ್ಮ ಗುರಿ ಎಂದು ಅವರು ಹೇಳಿದ್ದಾರೆ.

ನೀಟ್ ಆಕಾಂಕ್ಷಿಗಳು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಹಾಗೂ ಅವರ ನೋವು ಸಂಪೂರ್ಣವಾಗಿ ನ್ಯಾಯಯುತವಾದದ್ದು ಎಂದು ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಭದ್ರಪಡಿಸಲು ಮತ್ತು ಪೇಪರ್ ಸೋರಿಕೆ ಹಾವಳಿಯನ್ನು ತಡೆಯಲು ಸಮಗ್ರ ಸುಧಾರಣೆಗಳು ಹಾಗೂ ಕಠಿಣ ಕ್ರಮಗಳು ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version