ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: ಕೂಡಲೇ ಉತ್ತರಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ - Mahanayaka

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: ಕೂಡಲೇ ಉತ್ತರಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

14/06/2024

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷೆಯ ಅಕ್ರಮಗಳ ಕುರಿತು ಸಿಬಿಐ ತನಿಖೆಗೊಳಪಡಿಸಲು ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಎನ್‌ಟಿಎ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಇತರೆ ಆರೋಪಿಗಳಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಹಿತೆನ್‌ ಸಿಂಗ್‌ ಕಶ್ಯಪ್ ರ ಅರ್ಜಿಯ ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಾಧೀಶರಾದ ವಿಕ್ರಮ್‌ ನಾಥ್‌ ಹಾಗೂ ಸಂದೀಪ್‌ ಮೆಹ್ತಾ ಸಿಬಿಐ ಹಾಗೂ ಬಿಹಾರ್‌ ಸರ್ಕಾರಕ್ಕೂ ಕೂಡ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿದೆ.
ಇತರ ಉಳಿಕೆ ಪ್ರಕರಣದೊಂದಿಗೆ ಪಿಐಎಲ್‌ ವಿಚಾರಣೆಯನ್ನು ಬೇಸಿಗೆ ರಜೆ ಮುಗಿದ ನಂತರ ಜುಲೈ 8ರಂದು ಕಾರ್ಯಾರಂಭಿಸುವುದಾಗಿ ಪೀಠ ತಿಳಿಸಿತು.

ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ಗುರುವಾರದಂದು 1563 ಅಭ್ಯರ್ಥಿಗಳಿಗೆ ನೀಡಿದ್ದ ಕೃಪಾಂಕವನ್ನು ರದ್ದುಗೊಳಿಸಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.
ಕೃಪಾಂಕ ರದ್ದುಪಡಿಸಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆ ನೀಡಲಾಗಿದ್ದು, ಅವರಿಗೆ ಕೌನ್ಸಲಿಂಗ್‌ನಲ್ಲೂ ಪರಿಹಾರಾತ್ಮಕ ಅಂಕಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿತ್ತು.
1536 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳನ್ನು ನೀಡಿ ರ್ಯಾಂಕ್‌ ಬರಲು ಕಾರಣವಾದ ಎನ್‌ಟಿಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ