5:30 AM Wednesday 5 - November 2025

ನೀಟ್ ವಿವಾದ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ

18/06/2024

ನೀಟ್ ಪರೀಕ್ಷೆಯ ನಿರ್ವಹಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NTA ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಬಗ್ಗೆ ವೈದ್ಯಕೀಯ ಆಕಾಂಕ್ಷಿಗಳು ಮತ್ತು ಅವರ ಪೋಷಕರು ಪ್ರತಿಭಟನೆಯ ನಡೆಸಿದ್ದು, ಈ ಹಿನ್ನಲೆ ಸಣ್ಣ ನಿರ್ಲಕ್ಷ್ಯವನ್ನು ಸಹ ಕಡೆಗಣಿಸಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.
, ಶೇಕಡಾ 0.001 ನಿರ್ಲಕ್ಷ್ಯ ಆಗಿದ್ದರೂ ಸಹ ಅದನ್ನು ಸಂಪೂರ್ಣವಾಗಿ ಪರಿಹರಿಸಬೇಕು. ಮಕ್ಕಳು ಪರೀಕ್ಷೆಗೆ ತಯಾರಿ ನಡೆಸಿದ್ದಾರೆ, ಅವರ ಶ್ರಮವನ್ನು ನಾವು ಮರೆಯಲು ಸಾಧ್ಯವಿಲ್ಲ”. ಈ ಬಗ್ಗೆ ಸಕಾಲಿಕ ಕ್ರಮವನ್ನು ಸುಪ್ರೀಂ ಕೋರ್ಟ್ ನಿರೀಕ್ಷಿಸುತ್ತದೆ ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಎನ್‌ಟಿಎಗೆ ತಿಳಿಸಿದ್ದಾರೆ. ಜುಲೈ 8 ರಂದು ಅರ್ಜಿಗಳ ವಿಚಾರಣೆ ನಡೆಯಲಿದೆ.

ನೀಟ್‌-ಯುಜಿ ಪರೀಕ್ಷೆಯಲ್ಲಿ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿರುವ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಜೂನ್ 23 ರಂದು ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಮತಿಸಲಾಗುವುದು ಮತ್ತು ಜೂನ್ 30 ರ ಮೊದಲು ಫಲಿತಾಂಶ ಪ್ರಕಟಿಸಲಾಗುವುದು ಎಂದು ಅದು ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version