ನೀಟ್-ಯುಜಿ ಕೌನ್ಸೆಲಿಂಗ್ ಗೆ ತಡೆ: ಶೀಘ್ರದಲ್ಲೇ ನೂತನ ದಿನಾಂಕ ಪ್ರಕಟ

ನೀಟ್-ಯುಜಿ ಕೌನ್ಸೆಲಿಂಗ್ ಅನ್ನು ತಡೆ ಹಿಡಿಯಲಾಗಿದೆ. ಕೌನ್ಸೆಲಿಂಗ್ ನ ನೂತನ ದಿನಾಂಕವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಬಿಜೆಪಿಯ ಕೈಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಸುರಕ್ಷಿತವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜುಲೈ 8ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯವರೆಗೂ ಕಾಯುವಂತೆ ಪರೀಕ್ಷಾ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿರುವ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ, “ದಿನಗಳೆದಂತೆ ಇಡೀ ನೀಟ್-ಯುಜಿ ಹಗರಣವು ಮತ್ತಷ್ಟು ಹದಗೆಡತೊಡಗಿದೆ. ಈ ವಿಚಾರದಲ್ಲಿ ಅಜೈವಿಕ ಪ್ರಧಾನಿ ಹಾಗೂ ಅವರ ಜೈವಿಕ ಶಿಕ್ಷಣ ಸಚಿವರು ತಮ್ಮ ಅದಕ್ಷತೆ ಮತ್ತು ಅಸೂಕ್ಷ್ಮತೆಗಳಿಗೆ ಮತ್ತಷ್ಟು ಪುರಾವೆಗಳನ್ನು ಒದಗಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth