ನೇಹಾ ಹಿರೇಮಠ ಹತ್ಯೆ ವೈಯಕ್ತಿಕ ಕಾರಣಕ್ಕೆ ಆಗಿದೆ: ಸಿಎಂ ಸಿದ್ದರಾಮಯ್ಯ

siddaramaiah neha
19/04/2024

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವು ವೈಯಕ್ತಿಕ ಕಾರಣದಿಂದ ನಡೆದಿರುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ ಅದನ್ನು ನಮ್ಮ ಸರ್ಕಾರ ಮಾಡ್ತಿದೆ ಎಂದಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ನೇಹಾ ಹಿರೇಮಠ್ ಅವರ ಹತ್ಯೆಯನ್ನು ಖಂಡಿಸಿರುವ ಸಿಎಂ, ಮೃತ ಯುವತಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು,  ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿರುವುದಾಗಿ ಸಿಎಂ ಹೇಳಿದರು.

ಘಟನೆ ಸಂಬಂಧ ಉದ್ವೇಗಕ್ಕೊಳಗಾಗಿ ಕಾನೂನು ಕೈಗೆತ್ತಿಕೊಳ್ಳುವುದಾಗಲಿ, ಅಥವಾ ಸಮಾಜದ ಅಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ಒದಗಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿ ಮೀರಿ ಶ್ರಮಿಸಲಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version