ಬೆಳ್ಳಂಬೆಳಗೆ ಸರಣಿ ಅಪಘಾತ | ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವು - Mahanayaka
4:58 AM Thursday 4 - December 2025

ಬೆಳ್ಳಂಬೆಳಗೆ ಸರಣಿ ಅಪಘಾತ | ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವು

19/11/2020

ನೆಲಮಂಗಲ:  ಬೆಂಗಳೂರಿನಲ್ಲಿ ಬೆಳ್ಳಂಬೆಳಗೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ನೆಲಮಂಗಲದಲ್ಲಿ ನಡೆದಿದೆ.

ಲಾರಿ ಚಾಲಕನೋರ್ವ ವೇಗವಾಗಿ ಚಲಿಸುತ್ತಾ, ಏಕಾಏಕಿ ಬ್ರೇಕ್ ಹಾಕಿದ್ದು, ಈ ಸಂದರ್ಭದಲ್ಲಿ ಲಾರಿಯ ಹಿಂದಿನಿಂದ ಬರುತ್ತಿದ್ದ ಓಮ್ನಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಓಮ್ಲಿ ಹಿಂದಿದ್ದ ಬೈಕ್ ಕೂಡ ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಓಮ್ನಿ ಚಾಲಕನ ಪರಿಸ್ಥಿತಿ ಗಂಭೀರವಾಗಿದ್ದು,  ಗಾಯಾಳು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.  ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ