ನೆಲ್ಯಾಡಿ: ಕಾಡಿನ ಮಧ್ಯದಲ್ಲಿ ವಿಷ ಸೇವಿಸಿ ವ್ಯಕ್ತಿ ಸಾವಿಗೆ ಶರಣು
ನೆಲ್ಯಾಡಿ: ವ್ಯಕ್ತಿಯೊಬ್ಬರು ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೆರಿಯಶಾಂತಿ- ಇಚಿಲಂಪಾಡಿ ರಸ್ತೆಯ ಕಾಡಿನ ಮಧ್ಯೆ ನಡೆದಿದೆ.
ಏ.19ರಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಇಚಿಲಂಪಾಡಿ ಗ್ರಾಮದ ಬಿಜೇರು ನಿವಾಸಿ ಎಸ್.ಸಜೀವ(46) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ವರದಿಗಳ ಪ್ರಕಾರ, ಶನಿವಾರ ಮನೆಯಿಂದ ಬೈ ನಲ್ಲಿ ಹೊರಟಿದ್ದ ಅವರು ಸಂಜೆಯಾದರೂ ಮನೆಗೆ ವಾಪಸ್ ಆಗದೇ ಇದ್ದ ಹಿನ್ನೆಲೆಯಲ್ಲಿ ಕುಟುಂಬದವರು ಆತಂಕಗೊಂಡು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಗ್ಗೆ ಪೆರಿಯಶಾಂತಿಯಿಂದ ಇಚಿಲಂಪಾಡಿಗೆ ತೆರಳುವ ರಸ್ತೆಯ ಬದಿಯಲ್ಲಿ ಅವರ ಬೈಕ್ ಪತ್ತೆಯಾಗಿದ್ದು, ಇದರಿಂದ ಸಂಶಯಗೊಂಡ ಕುಟುಂಬಸ್ಥರು ಸುತ್ತಮುತ್ತ ಶೋಧ ನಡೆಸಿದರು. ನಂತರ ಕಾಡಿನ ಮಧ್ಯೆ ಮರದ ಬುಡದಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ.
ಸ್ಥಳದಲ್ಲಿ ಮದ್ಯದ ಬಾಟಲಿಗಳು ಬಿದ್ದಿರುವುದು ಕಂಡುಬಂದಿದ್ದು, ಅವರು ಮೊದಲು ಮದ್ಯ ಸೇವಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























