ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ : 10ಕ್ಕೂ ಅಧಿಕ ಮಂದಿಗೆ ಗಾಯ - Mahanayaka

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ : 10ಕ್ಕೂ ಅಧಿಕ ಮಂದಿಗೆ ಗಾಯ

nelyadi
07/06/2025

ನೆಲ್ಯಾಡಿ: ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಂಗಳೂರು—ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.

ಬಸ್ ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ಗುಂಡ್ಯ ಸಮೀಪ ತಲುಪುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ 10ಕ್ಕೂ ಅಧಿಕ ಜನರು ಗಾಯಗೊಂಡರು ಮತ್ತು ಅವರನ್ನು ತಕ್ಷಣವೇ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಅಪಘಾತದಲ್ಲಿ ಇಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ