ನೆಲ್ಯಾಡಿ: ಹೋಟೆಲ್ ಶೌಚಾಲಯದಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವು

crime
19/04/2026

ನೆಲ್ಯಾಡಿ: ಇಲ್ಲಿನ ರೆಖ್ಯ ಗ್ರಾಮದ ಮಲ್ನಾಡ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಶನಿವಾರ (ಏಪ್ರಿಲ್ 18) ಸಂಜೆ ಹೋಟೆಲ್‌ ನ ಶೌಚಾಲಯದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರೆಖ್ಯ ಗ್ರಾಮದ ಎಂಜಿರ ಬಳಿ ಇರುವ ಮಲ್ನಾಡ್ ಹೋಟೆಲ್ನಲ್ಲಿ ಉತ್ತರ ಪ್ರದೇಶ ಮೂಲದ ಹರಿಶಂಕರ್ (52 ವರ್ಷ) ಎಂಬುವವರು ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ ಅವರು ಶೌಚಾಲಯಕ್ಕೆ ತೆರಳಿದ್ದು, ಬಹಳ ಹೊತ್ತಾದರೂ ಹೊರಬರದಿದ್ದಾಗ ಸಹೋದ್ಯೋಗಿಗಳಲ್ಲಿ ಆತಂಕ ಮೂಡಿದೆ. ಅನುಮಾನಗೊಂಡು ಕಿಟಕಿಯಿಂದ ಇಣುಕಿ ನೋಡಿದಾಗ ಹರಿಶಂಕರ್ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಹೋಟೆಲ್ ಮಾಲೀಕರು ನೀಡಿದ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹೆಚ್ಚಿನ ತಪಾಸಣೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ವ್ಯಕ್ತಿಯ ಹೆಸರು ಮತ್ತು ಮೂಲ ರಾಜ್ಯ ಉತ್ತರ ಪ್ರದೇಶ ಎಂಬ ಮಾಹಿತಿ ಲಭ್ಯವಿದೆಯಾದರೂ, ಅವರ ನಿಖರವಾದ ಮನೆ ವಿಳಾಸದ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತರ ಕುಟುಂಬದವರ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version