ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದ ವೇಳೆ ನೇಣಿಗೆ ಸಿಲುಕಿ ಬಾಲಕ ದುರ್ಮರಣ!
ಚಿತ್ರದುರ್ಗ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತಪಟ್ಟ ಬಾಲಕನಾಗಿದ್ದು, ಈತ ಇಲ್ಲಿನ ಎಸ್ ಎಲ್ ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ.
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಗತ್ ಸಿಂಗ್ ಪಾತ್ರವನ್ನು ಮಾಡಲು ಬಾಲಕ ರಿಹರ್ಸಲ್ ನಡೆಸುತ್ತಿದ್ದ ಎನ್ನಲಾಗಿದೆ.
ಮನೆಗೆ ಬಂದ ಬಳಿಕವೂ ಬಾಲಕ ನಾಟಕ ಅಭ್ಯಾಸ ಮುಂದುವರಿಸಿದ್ದ. ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಪರಿಣಾಮವಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಸಂಜೆ ಪೋಷಕರು ಮನೆಗೆ ಬಂದಾಗ ಬಾಲಕ ಫ್ಯಾನ್ ನಲ್ಲಿ ನೇತಾಡುತ್ತಿದ್ದ ದೃಶ್ಯ ಕಂಡು ಬಂದಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅದಾಗಲೇ ಬಾಲಕ ಸಾವನ್ನಪ್ಪಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka