ವಿವಿಧ ಕಂಪೆನಿಗಳಲ್ಲಿ ವಿವಿಧ ಹುದ್ದೆಗಳು: ನೇರ ಸಂದರ್ಶನದಲ್ಲಿ ಭಾಗವಹಿಸಿ - Mahanayaka

ವಿವಿಧ ಕಂಪೆನಿಗಳಲ್ಲಿ ವಿವಿಧ ಹುದ್ದೆಗಳು: ನೇರ ಸಂದರ್ಶನದಲ್ಲಿ ಭಾಗವಹಿಸಿ

31/12/2020

ಹಾಸನ: ಹಾಸನದ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಜ.5 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

8ನೇ ತರಗತಿ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಐ.ಟಿ.ಐ/ ಡಿಪ್ಲೋಮೋ, ಯಾವುದೇ ಪದವಿ/ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳ್ಳುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು ತಮ್ಮ ಸ್ವವಿವರಗಳು ಆಧಾರ್ ಕಾರ್ಡ್ ಮತ್ತು ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಕಛೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಖುದ್ದಾಗಿ ಅಥವಾ ದೂ.ಸ : 08172-296374 ಅಥವಾ 8722606874 / 8660141863 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಪಾಲಿಸುವಂತೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ