1:04 PM Wednesday 9 - September 2026

ನೆರೆಮನೆಯ ವ್ಯಕ್ತಿಯಿಂದಲೇ 5 ವರ್ಷದ ಬಾಲಕಿಯ ಅತ್ಯಾಚಾರ-ಕೊಲೆ

morena madhyapradesh
06/07/2021

ಮೊರೆನಾ: ನೆರೆಯ ಮನೆಯ ವ್ಯಕ್ತಿಯೋರ್ವ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಬ್ರೆಡ್ ತರಲೆಂದು 5 ವರ್ಷ ವಯಸ್ಸಿನ ಬಾಲಕಿ ತನ್ನ ಮನೆಯ ಸಮೀಪದ ಅಂಗಡಿಗೆ ತೆರಳಿದ್ದಳು. ಆದರೆ, ಬಾಲಕಿ ಅಂಗಡಿಗೆ ಹೋಗಿ ಒಂದೂವರೆ ಗಂಟೆಯಾದರೂ ವಾಪಸ್ ಬಾರದೇ ಇದ್ದುದರಿಂದ ಮನೆಯವರು ಆತಂಕಕ್ಕೀಡಾಗಿದ್ದು,  ಬಾಲಕಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಅಂಗಡಿ ಬಳಿಯಲ್ಲಿ ಹುಡುಕಾಡಿದ ಬಳಿಕ ಅಂಗಡಿಯ ಸಿಸಿ ಕ್ಯಾಮರವನ್ನು ಪರಿಶೀಲಿಸಿದ್ದು, ಈ ವೇಳೆ ಪಕ್ಕದ ಮನೆಯ ಚೋಟು ಥೋಮರ್ ಎಂಬಾತ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿರುವ ದೃಶ್ಯ ಕಂಡು ಬಂದಿದೆ.

ಈ ವೇಳೆ ಸ್ಥಳೀಯರು ಚೋಟು ಥೋಮರ್ ಮನೆಗೆ ನುಗ್ಗಿದ್ದು, ಬಾಲಕಿಯನ್ನು ತಕ್ಷಣವೇ ವೈದ್ಯರ ಬಳಿಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಇನ್ನೂ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ  ಶೋಧ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version