ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ದಾರುಣ ಸಾವು - Mahanayaka
8:14 PM Tuesday 16 - September 2025

ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ದಾರುಣ ಸಾವು

konaje
27/03/2023

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಕಾಶ್ ಗಟ್ಟಿ (46) ಮೃತಪಟ್ಟವರು. ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು.


Provided by

ಸುಮಾರು 20 ರಷ್ಟು ನೆಂಟರು, ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿ ಇರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನದಿ ನೀರಿನ ಹೂಳಿನಲ್ಲಿ ಹೂತು ಹೋಗಿ ನದಿ ನೀರಿನಲ್ಲಿ ಮುಳುಗಿದ್ದಾರೆ. ಸ್ಥಳೀಯ ಈಜುಗಾರರು ಅವರನ್ನು ಮೇಲಕ್ಕೆತ್ತಲು ಪ್ರಯತ್ನಿಸಿ ಸಾಧ್ಯವಾಗದೇ ಇದ್ದಾಗ, ಉತ್ತರ ಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು ಬೈಕಂಪಾಡಿಯ ಎಂ. ಸಿ. ಎಫ್‌ ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಗತಿಪರ ಕೃಷಿಕರೂ ಆಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ