ಉಪ್ಪಿನಂಗಡಿಯಲ್ಲಿ ರಸ್ತೆಯಲ್ಲೇ ಹರಿದ ನೇತ್ರಾವತಿ ನೀರು!
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಈ ನಡುವೆ ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ನೇತ್ರಾವತಿ ನದಿಯ ನೀರು ಹರಿದು ಬಂದಿದೆ. ರಸ್ತೆಯ ಮೇಲೆಯೇ ನೀರು ಹರಿಯುತ್ತಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ರಸ್ತೆ ಮೇಲೆಯೇ ನದಿ ನೀರು ಹರಿಯುತ್ತಿರುವುದರಿಂದ ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ರಸ್ತೆಯ ಮಟ್ಟಕ್ಕೆ ನೇತ್ರಾವತಿ ನೀರು ಬಂದಿದ್ದು, ಸ್ಥಳದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ನೀರಿನ ಮಟ್ಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: