ಸೋರುತ್ತಿದೆ ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಿಸಿದ್ದ ನೂತನ ಸಂಸತ್ ಭವನ! - Mahanayaka

ಸೋರುತ್ತಿದೆ ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಿಸಿದ್ದ ನೂತನ ಸಂಸತ್ ಭವನ!

parlement
01/08/2024

ನವದೆಹಲಿ: ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ನೂತನ ಸಂಸತ್ ಭವನ ಸೋರುತ್ತಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ವಿಪಕ್ಷ ನಾಯಕರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ವ್ಯಂಗ್ಯವಾಡಿದೆ.


Provided by

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಅಂತ ಪ್ರಶ್ನೆ ಮಾಡಿದ್ದು, ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ.

ಇನ್ನೂ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ಹೊರಗೆ ಪೇಪರ್ ಲೀಕ್ ಒಳಗೆ ನೀರು ಲೀಕ್ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ