ಭಾರತಕ್ಕೆ ಮತ್ತೆ ಹೊಸ ಸುಂಕ | ಟ್ರಂಪ್ ಎಚ್ಚರಿಕೆ, “ಭಾರತದ ಅಕ್ಕಿ ಅಮೆರಿಕದಲ್ಲಿ ಸುರಿಯುವಂತಿಲ್ಲ!”

trump
09/12/2025

ವಾಷಿಂಗ್ಟನ್: ಭಾರತದ ಕೃಷಿ ಆಮದಿನ ಮೇಲೆ ಅದರಲ್ಲೂ ವಿಶೇಷವಾಗಿ ಅಕ್ಕಿ ಆಮದಿನ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಎಚ್ಚರಿಕೆಯನ್ನ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.

ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ಇತರ ಏಷ್ಯಾದ ಪೂರೈಕೆದಾರರಿಂದ ಕೃಷಿ ಆಮದಿನ ಬಗೆಗಿನ ತಮ್ಮ ಟೀಕೆಗಳನ್ನು ತೀವ್ರಗೊಳಿಸಿದ್ದಾರೆ.

ಇನ್ನು ಮುಂದೆ ಭಾರತದ ತನ್ನ ಅಕ್ಕಿಯನ್ನು ಅಮೆರಿಕದಲ್ಲಿ ಸುರಿಯುವಂತಿಲ್ಲ. ಭಾರತದ ಅಕ್ಕಿ ಮತ್ತು ಕೆನಡಾದ ರಸಗೊಬ್ಬರಗಳ ಮೇಲೆ ಹೊಸ ಸುಂಕಗಳನ್ನು ಪರಿಚಯಿಸುವ ಬಗ್ಗೆ ನಾನು ಗಂಭೀರವಾಗಿ ಚಿಂತಿಸುತ್ತಿದ್ದೇನೆಂದು ಹೇಳಿದ್ದಾರೆ.

ಸಭೆಯಲ್ಲಿ ದೇಶಿಯ ಅಕ್ಕಿ ಉತ್ಪಾದಕರ ಸಮಸ್ಯೆಗಳ ಬಗ್ಗೆ ಅಧ್ಯಕ್ಷರ ಗಮನ ಸೆಳೆದ ಲೂಸಿಯಾನ ಮೂಲದ ಅಕ್ಕಿ ಗಿರಣಿ ಮಾಲೀಕ ಮೆರಿಲ್ ಕೆನಡಿ, ಇತರ ರಾಷ್ಟ್ರಗಳು ಅಮೆರಿಕದ ಮಾರುಕಟ್ಟೆ ಅಕ್ಕಿ ತಂದು ಸುರಿಯುವುದರಿಂದ ದೇಶದ ದಕ್ಷಿಣ ಭಾಗದಲ್ಲಿ ಅಕ್ಕಿ ಉತ್ಪಾದಕರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.  ಈ ವೇಳೆ ಅಕ್ಕಿ ಸುರಿಯುತ್ತಿರುವವರು ಯಾರು? ಎಂದು ಟ್ರಂಪ್‌ ಕೇಳಿದ್ದು, ಭಾರತ ಮತ್ತು ಥಾಯ್ಲೆಂಡ್‌ ಎಂದು ಕೆನಡಿ ಹೇಳಿದ್ದಾರೆ. ಚೀನಾ ಕೂಡ ಈ ಸಾಲಿನಲ್ಲಿ ಇದ್ದು, ಪೋರ್ಟೊ ರಿಕೊಗೆ ಅಕ್ಕಿ ರಫ್ತು ಮಾಡುತ್ತಿದೆ. ಪೋರ್ಟೊ ರಿಕೊ ಅಮೆರಿಕದ ಅಕ್ಕಿಗೆ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಿತ್ತು. ಕಳೆದ ಒಂದು ವರ್ಷದಿಂದ ನಾವು ಅಲ್ಲಿಗೆ ಅಕ್ಕಿ ರವಾನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಐದು ವರ್ಷಗಳಿಂದ ಈ ವ್ಯವಹಾರ ನಡೆಯುತ್ತಿದ್ದು, ಈಗ ಅದು ನಮ್ಮ ಮಾರುಕಟ್ಟೆಯನ್ನು ವ್ಯಾಪಿಸಿದೆ. ನೀವು ವಿಧಿಸಿರುವ ಸುಂಕಗಳಿಂದ ಅದರ ಮೇಲೆ ಸ್ವಲ್ಪ ಪರಿಣಾಮ ಬಿದ್ದಿದೆ. ಆದರೆ, ನಾವು ಸುಂಕವನ್ನು ದ್ವಿಗುಣಗೊಳಿಸಬೇಕಾಗಿದೆ ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಟ್ರಂಪ್ ಅವರು, ಸುಂಕವು ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version