ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಎಸ್ ಐಟಿ ಕಚೇರಿಗೆ ಆಗಮಿಸಿದ ಉದಯ್ ಜೈನ್ - Mahanayaka
11:58 AM Sunday 7 - September 2025

ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಎಸ್ ಐಟಿ ಕಚೇರಿಗೆ ಆಗಮಿಸಿದ ಉದಯ್ ಜೈನ್

uday jain
03/09/2025

ಬೆಳ್ತಂಗಡಿ:  ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವು ಸಿಗ್ತಾ ಇದೆ. ಇದೀಗ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳೆಂದು ಹೆಸರಿಸಲಾದ ಉದಯ್ ಜೈನ್, ಧೀರಜ್ ಕೆಲ್ಲಾ ಮತ್ತು ಮಲ್ಲಿಕ್ ಜೈನ್‌ ಗೆ ವಿಶೇಷ ತನಿಖಾ ತಂಡ(SIT) ಬುಲಾವ್ ನೀಡಿದೆ.


Provided by

ಎಸ್ ಐಟಿ ಬುಲಾವ್ ಹಿನ್ನೆಲೆ ಎಸ್‌ ಐಟಿ ಕಚೇರಿಗೆ ಆಗಮಿಸಿದ ಉದಯ್ ಜೈನ್  ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಾನು ಯಾವುದೇ ತನಿಖೆಗೆ ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

2012ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿತ್ತು. ಸೌಜನ್ಯ ಅವರ ಕುಟುಂಬವು ಉದಯ್ ಜೈನ್ ಸೇರಿದಂತೆ ಹಲವರ ಮೇಲೆ ಆರೋಪ ಮಾಡಿತ್ತು. ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕಾಗಿ ಕುಟುಂಬವು ಸತತ ಹೋರಾಟ ನಡೆಸಿತ್ತು. ಈಗ ಎಸ್‌ ಐಟಿ ತನಿಖೆಯ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದೆ  ಎಂದು ತಿಳಿದು ಬಂದಿದೆ.

ಬೆಳ್ತಂಗಡಿಯ ಎಸ್‌ ಐಟಿ ಕಚೇರಿಯಲ್ಲಿ ಉದಯ್ ಜೈನ್‌ ಗೆ ವಿಚಾರಣೆಗೆ ಕರೆಯಲಾಗಿದೆ. ಜೈನ್‌ ತಾವು ಯಾವುದೇ ತನಿಖೆಗೆ ಸಹಕರಿಸಲು ಸಿದ್ಧರಿರುವುದಾಗಿ ಹೇಳಿಕೆ ನೀಡಿದ್ದಾರೆ. ಈ ವಿಚಾರಣೆಯು ಸೌಜನ್ಯ ಕೇಸ್‌ ನ ತನಿಖೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ