ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು: ಪ್ರೊಫೆಸರ್ ವಿರುದ್ಧ ಕೇಸ್ - Mahanayaka

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು: ಪ್ರೊಫೆಸರ್ ವಿರುದ್ಧ ಕೇಸ್

akanksha s nair
19/05/2025


Provided by

ಬೆಳ್ತಂಗಡಿ:  ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಎಸ್, ನಾಯರ್ ಸಾವಿಗೆ ಹೊಸ ತಿರುವು ದೊರಕಿದ್ದು,  ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ವರದಿಗಳ ಪ್ರಕಾರ ಆಕಾಂಕ್ಷಾ ಪಂಜಾಬ್ ನ ಫಗ್ವಾರದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಬಿಜಿಲ್ ಮಾಥ್ಯೂ ಎಂಬಾತನನ್ನು ಪ್ರೀತಿಸುತ್ತಿದ್ದಳು.  ಆತ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ವಿವಾಹಿತನಾಗಿದ್ದ ಆತ ಎರಡು ಮಕ್ಕಳ ತಂದೆಯಾಗಿದ್ದ. ಪಂಜಾಬ್ ಗೆ ತೆರಳಿದ್ದ ಆಕಾಂಕ್ಷಾ ಮ್ಯಾಥ್ಯೂ ಮನೆಗೆ ಹೋಗಿ ಜಗಳ ಆಡಿದ್ದಳು, ಬಳಿಕ ವಿಶ್ವವಿದ್ಯಾಲಯದಲ್ಲೂ ಆತನ ಜೊತೆಗೆ ಜಗಳವಾಡಿದ್ದಳು. ನಂತರ ಆತನ ಕಚೇರಿಯಿಂದ ಹೊರ ಬಂದು ಅದೇ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದ್ದು, ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.

ಇನ್ನೂ ಆಕಾಂಕ್ಷಾಗೆ ಪ್ರೊಫೆಸರ್ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪವೂ ಕೇಳಿ ಬಂದಿದೆ. ಸದ್ಯ ಪ್ರೊಫೆಸರ್ ವಿರುದ್ಧ ಪಂಜಾಬ್ ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಬಯಲಾಗಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ