ಹೊಸ ವರ್ಷಾಚರಣೆ: ಕಾಫಿನಾಡಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ!
ಚಿಕ್ಕಮಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರಮುಖ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಜಿಲ್ಲೆಯ ಪ್ರಸಿದ್ಧ ತಾಣಗಳಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ ಗುಡ್ಡ ಹಾಗೂ ಪ್ರಮುಖ ಜಲಪಾತಗಳು ಸೇರಿದಂತೆ ಒಟ್ಟು 22 ಪ್ರವಾಸಿ ಕೇಂದ್ರಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ನಿರ್ಬಂಧವು ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಮುಂಜಾನೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅವರ ಮನವಿಯ ಮೇರೆಗೆ ಈ ಆದೇಶ ಹೊರಡಿಸಲಾಗಿದ್ದು, ಕುಡಿದ ಮತ್ತಿನಲ್ಲಿ ಎಂಜಾಯ್ ಮಾಡುವಾಗ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪ್ರವಾಸಿ ತಾಣಗಳು ಮತ್ತು ಜಿಲ್ಲೆಯ ಪ್ರಮುಖ ಮಾರ್ಗಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತವು ಹೈ ಅಲರ್ಟ್ ಘೋಷಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























